ಮೆಹಬೂಬಾ ಮುಫ್ತಿ - ನರೇಂದ್ರ ಮೋದಿ 
ದೇಶ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಉಳಿಸಿಕೊಳ್ಳುವುದರ ಮೇಲೆ ಬಿಜೆಪಿ-ಪಿಡಿಪಿ ಮೈತ್ರಿ ನಿಂತಿದೆ: ಮುಫ್ತಿ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಸಂವಿಧಾನತ್ಮ ವಿಶೇಷ ಸ್ಥಾನಮಾನವನ್ನು ಉಳಿಸಿಕೊಳ್ಳುವ ಸಂಬಂಧ ಕಾಶ್ಮೀರ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಸಂವಿಧಾನತ್ಮ ವಿಶೇಷ ಸ್ಥಾನಮಾನವನ್ನು ಉಳಿಸಿಕೊಳ್ಳುವ ಸಂಬಂಧ ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಪ್ರಧಾನಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಫ್ತಿ, ಬಿಜೆಪಿ-ಪಿಡಿಪಿ ಮೈತ್ರಿಯ ಅಜೆಂಡಾಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಶೇ.100ರಷ್ಟು ಭರವಸೆ ನೀಡಿದ್ದಾರೆ ಎಂದರು.
ಕಣಿವೆ ರಾಜ್ಯದ ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ನಮ್ಮ ಗುರುತು ಅಪಾಯದಲ್ಲಿದೆ ಎಂದು ಜನರು ಭಾವಿಸುತ್ತಿದಾರೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರ ಭಾರತದ ಕಿರೀಟ ಎಂಬ ಸದೇಶವನ್ನು ನಾವು ನೀಡಬೇಕಾಗಿದೆ. ಭಾರತದ ಭಾವನೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಭಾವನೆಗೂ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.
ಕಾಶ್ಮೀರಕ್ಕೆ ಸಂವಿಧಾನದಡಿ ವಿಶೇಷ ಅಧಿಕಾರ, ಹಕ್ಕು, ಸವಲತ್ತು ಒದಗಿಸುವ ಸಲುವಾಗಿ ರಾಜ್ಯದ ಪ್ರತಿಪಕ್ಷದ ನಾಯಕರು, ಪ್ರಧಾನಿ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಚರ್ಚಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಇಂದು ಜಮ್ಮುಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಪ್ರಧಾನಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿ, ವಿಶೇಷ ಸ್ಥಾನಮಾನ ಬದಲಾಯಿಸುವ ಪ್ರಯತ್ನದ ವಿರುದ್ಧ ಸಹಾಯ ಕೋರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!