ವಿನಯ್ ಕಟಿಯಾರ್ 
ದೇಶ

ಧ್ವಜಾರೋಹಣ ಮಾಡದವರು, ರಾಷ್ಟ್ರಗೀತೆ ಹಾಡದವರು ದೇಶದ್ರೋಹಿಗಳು: ಕಟಿಯಾರ್

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು...

ನವದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಇದನ್ನು ಪಾಲಿಸದ ಜನರನ್ನು ದೇಶದ್ರೋಹಿಗಳು ಎಂದು ಪರಿಗಣಿಸಬೇಕು ಎಂದು ಹೇಳಿದ್ದಾರೆ. 
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಕಟಿಯಾರ್, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶದ ನಡೆ ನಿಜಕ್ಕೂ ಸ್ವಾಗತಾರ್ಹ. ಯೋಗಿ ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ. ಇದು ನಮ್ಮ ಹೆಮ್ಮೆ ಇದನ್ನು ನಾವು ಹಾರಿಸಬೇಕು. ಯಾವುದೇ ಶಾಲೆ ಇರಲಿ ಮದರಾಸ ಇರಲಿ ಅಥವಾ ಯಾವುದೇ ಇತರ ಸಂಘಟನೆಗಳೆ ಆಗಲಿ ನಾವು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಹಾರಿಸಬೇಕು. ಇದನ್ನು ಒಪ್ಪದವರನ್ನು ದೇಶದ್ರೋಹಿಗಳೆಂದು ಪರಿಗಣಿಸಬೇಕಿದೆ ಎಂದರು. 
ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ಮದರಾಸಗಳಲ್ಲಿ ಧ್ವಜಾರೋಹಣ, ರಾಷ್ಟ್ರಗೀತೆ ಹಾಡುವಂತೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ ಬೆಳಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಬೇಕು. ಜತೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋಗಳನ್ನು ಮಾಡುವಂತೆ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!