ಲಖನೌ: ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಮೇಲ್ವಿಚಾರಣೆಗಾಗಿ ಕಾಂಗ್ರೆಸ್ ನಿಯೋಗವೊಂದು ಇಂದು ಗೋರಕ್ ಪುರಕ್ಕೆ ಆಗಮಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದೇ ನೇತೃತ್ವದಲ್ಲಿ ನಾಲ್ಕು ಮಂದಿಯ ಕಾಂಗ್ರೆಸ್ ನಿಯೋಗ ಇಂದು ಗೋರಕ್ ಪುರಕ್ಕೆ ಆಗಮಿಸಲಿದ್ದು, ಪರಿಸ್ಥಿತಿ ಅವಲೋಕಿಸಲಿದ್ದಾರೆ. ಬಳಿಕ ಇಂದು ಸಂಜೆ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಗೆ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ರಾಜ್ ಬಬ್ಬರ್ ಸೇರಿದಂತೆ ಒಟ್ಟು ನಾಲ್ಕು ನಾಯಕರ ತಂಡ ಇಂದು ಗೋರಕ್ ಪುರಕ್ಕೆ ಆಗಮಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ, ಅವರಿಗೆ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ತಂಡ ಸಾಥ್ ನೀಡಲಿದೆ. ಅಂತೆಯೇ ಇಂದು ಬೆಳಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿಯಾಗಲಿದೆ ಎಂದು ತಿಳಿದುಬಂದಿದೆ.