ಸಂಗ್ರಹ ಚಿತ್ರ 
ದೇಶ

ಗೋರಕ್ ಪುರ ಆಸ್ಪತ್ರೆ ದುರಂತ: ತುರ್ತು ಉನ್ನತ ಮಟ್ಟದ ಸಭೆ ಕರೆದ ಸಿಎಂ ಯೋಗಿ ಆದಿತ್ಯಾನಾಥ್

ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ನಡೆದ ಆಸ್ಪತ್ರೆ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯಾನಾಥ್ ಅವರು ಉನ್ನತ ಮಟ್ಟದ ಅಧಿಕಾರಿಗಳು ತುರ್ತು ಸಭೆ ಕರೆದಿದ್ದಾರೆ.

ಲಖನೌ: ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ನಡೆದ ಆಸ್ಪತ್ರೆ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯಾನಾಥ್ ಅವರು ಉನ್ನತ ಮಟ್ಟದ ಅಧಿಕಾರಿಗಳು ತುರ್ತು ಸಭೆ ಕರೆದಿದ್ದಾರೆ.

ಲಖನೌನಲ್ಲಿ ಸಿಎಂ ಯೋಗಿ ಆದಿತ್ಯಾನಾಥ್ ಸಭೆ ಕರೆದಿದ್ದು, ಅಧಿಕಾರಿಗಳಿಂದ ಬಿಆರ್ ಡಿ ಆಸ್ಪತ್ರೆ ದುರಂತಕ್ಕೆ ಸಂಬಂಧಿಸಿದಂತ ವರದಿ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಇಂದಿನ ಮಹತ್ವದ ಸಭೆಗೆ ಸಿಎಂ  ಯೋಗಿ ಆದಿತ್ಯಾನಾಥ್ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು, ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್  ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಸಭೆ ಬಳಿಕ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್ ಅವರು ಖುದ್ಧು ದುರಂತ ಸಂಭವಿಸಿದ ಬಿಆರ್ ಡಿ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಪ್ರತ್ಯಕ್ಷ ಮಾಹಿತಿ ಕಲೆಹಾಕಲಿದ್ದಾರೆ.  ಬಳಿಕ ಆ ವರದಿಯನ್ನು ಸಿಎಂ ಯೋಗಿ ಆದಿತ್ಯಾನಾಥ್ ಅವರಿಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!