ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಮಲಗಿದ್ದ ಸಹೋದರಿಯರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆಯಲ್ಲಿ ಮಲಗಿದ್ದ ಸಹೋದರಿಯ ಮೇಲೆ ಪೆಟ್ರೋಲ್ ಸುರಿದಿರುವ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯ ನವಾಬ್ಗಂಜ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

ಬರೇಲಿ: ಮನೆಯಲ್ಲಿ ಮಲಗಿದ್ದ ಸಹೋದರಿಯ ಮೇಲೆ ಪೆಟ್ರೋಲ್ ಸುರಿದಿರುವ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯ ನವಾಬ್ಗಂಜ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. 
ಮಧ್ಯರಾತ್ರಿ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು ಮಲಗಿದ್ದ ಸಹೋದರಿಯರ ಮೇಲೆ ಏಕಾಏಕಿ ಪೆಟ್ರೋಲ್ ಸುರಿದಿದ್ದಾರೆ. ನಂತರ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಯುವತಿಯರ ಚೀರಾಟ ಕೇಳಿದ ಪೋಷಕರು ಕೂಡಲೇ ಯುವತಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 
ಗುಲ್ಶಾನ್ ಹಾಗೂ ಫಿಜಾ ಗಾಯಗೊಂಡ ಸಹೋದರಿಯರಾಗಿದ್ದಾರೆ. ಪ್ರಸ್ತುತ ಗುಲ್ಶಾನ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಫಿಜಾ ಎಂಬ ಯುವತಿ ಶೇ.40 ರಷ್ಟು ಗಾಯಗೊಂಡಿದ್ದಾಳೆಂದು ತಿಳಿದುಬಂದಿದೆ. 
ಮನೆಯೊಳಗೆ ನುಗ್ಗಿದ ಕೆಲ ದುಷ್ಕರ್ಮಿಗಳು ಮಲಗಿದ್ದ ನಮ್ಮ ಮಕ್ಕಳ ಮೇಲೆ ಬೆಂಕಿ ಹಚ್ಚಿದ್ದರು. ದುಷ್ಕರ್ಮಿಗಳು ಯಾರು ಎಂಬುದು ನಮಗೆ ಗೊತ್ತಿಲ್ಲ. ಬೆಂಕಿ ಹಚ್ಚಿದ ಬಳಿಕ ಸ್ಥಳದಿಂದ ಓಡಿ ಹೋದರು. ದುಷ್ಕರ್ಮಿಗಳ ಮುಖವನ್ನು ನೋಡಲು ಸಾಧ್ಯವಾಗಲಿಲ್ಲ. ನಮಗೆ ಯಾರೂ ಮೇಲೂ ಅನುಮಾನಗಳಿಲ್ಲ ಎಂದು ಯುವತಿಯರ ತಾಯಿ ಹೇಳಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?