ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

7 ತಿಂಗಳಲ್ಲಿ 70 ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆ ಸೇರಿದ್ದಾರೆ: ಅಧಿಕಾರಿಗಳು

ಕಳೆದ 7 ತಿಂಗಳಲ್ಲಿ 70 ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆ ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಗ್ರರು (ಸಂಗ್ರಹ ಚಿತ್ರ)
Srinivas Rao BV
Updated On : 13 Aug 2017, 2:39 am
ಜಮ್ಮು: ಕಳೆದ 7 ತಿಂಗಳಲ್ಲಿ 70 ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆ ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
2014 ರಿಂದ ಭಯೋತ್ಪಾದಕ ಸಂಘಟನೆ ಸೇರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಿಟಿಐ ಗೆ ಮಾಹಿತಿ ನೀಡಿರುವ ಹಿರಿಯ ಭದ್ರತಾ ಅಧಿಕಾರಿಗಳು ದಕ್ಷಿಣ ಕಾಶ್ಮೀರದ ಮೂರು ಜಿಲ್ಲೆಗಳಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸೇರುತ್ತಿರುವ ಯುವಕರ ಸಂಖ್ಯೆ ಹೆಚ್ಚುತ್ತಿದ್ದು, ಪುಲ್ವಾಮ, ಶೋಪಿಯಾನ್, ಕುಲ್ಗಾಮ್ ಜಿಲ್ಲೆಗಳು ಟೆಕ್ ಸಾವಿ ಭಯೋತ್ಪಾದಕರ ತಾಣವಾಗುತ್ತಿದೆ ಎಂದು ಹೇಳಿದ್ದಾರೆ. 
2014 ರಿಂದ ಭಯೋತ್ಪಾದಕ ಸಂಘಟನೆಗೆ ಸೇರುತ್ತಿರುವ ಉಗ್ರರ ಸಂಖ್ಯೆ ಹೆಚ್ಚಾಗುತ್ತಿದ್ದು, 2014 ರಲ್ಲಿ 53 ರಿದ್ದ ಸಂಖ್ಯೆ 2015 ರಲ್ಲಿ 66 ಕ್ಕೇರಿದೆ.2016 ರಲ್ಲಿ 88 ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆ ಸೇರಿದ್ದು, ಕಳೆದ 7 ತಿಂಗಳಲ್ಲಿ 70 ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆಗೆ ಸೇರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

Advertisement

Advertisement

ಪುಲ್ವಾಮದಲ್ಲಿ ಅತಿ ಹೆಚ್ಚು ಭಯೋತ್ಪಾದಕರಿದ್ದು, ಕಳೆದ 7 ತಿಂಗಳುಗಳಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ 38 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments