ದೇಶ

ಹಿ.ಪ್ರ ಸರ್ಕಾರ, ಸ್ಥಳೀಯ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಬೇಕು: ರಾಹುಲ್ ಗಾಂಧಿ

Sumana Upadhyaya
ನವದೆಹಲಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಬಗ್ಗೆ ಸಂತಾಪ ಸೂಚಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕುಟುಂಬದವರಿಗೆ ಸಾಧ್ಯವಾದ ಎಲ್ಲಾ ನೆರವು ನೀಡುವಂತೆ ಹಿಮಾಚಲ ಪ್ರದೇಶ ಸರ್ಕಾರವನ್ನು ಮನವಿ ಮಾಡಿದ್ದಾರೆ.
ಮಂಡಿ ಭೂಕುಸಿತದಲ್ಲಿ ತಮ್ಮವರನ್ನು ಕಳೆದುಕೊಂಡವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಹಿಮಾಚಲ ಪ್ರದೇಶ ಸರ್ಕಾರ ಮತ್ತು ಸ್ಥಳೀಯ ಕಾಂಗ್ರೆಸ್ ಘಟಕ ಅವರ ಕುಟುಂಬಗಳಿಗೆ ಸಾಧ್ಯವಾದ ಎಲ್ಲಾ ರೀತಿಯ ನೆರವು ನೀಡಲಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ ಟ್ವೀಟ್ ಮಾಡಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಮಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ದುರ್ಘಟನೆ ತೀವ್ರ ಬೇಸರವನ್ನುಂಟುಮಾಡುತ್ತದೆ. ಮೃತಪಟ್ಟವರ ಕುಟುಂಬದವರಿಗೆ ದೇವರು ಶಕ್ತಿ ನೀಡಲಿ ಎಂದು ಕೋರಿದರು.
ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್, ರಕ್ಷಣಾ ಕಾರ್ಯ ಮುಂದುವರಿದಿದ್ದು, ಸದ್ಯದಲ್ಲಿಯೇ ಸರ್ಕಾರ ಪರಿಹಾರವನ್ನು ಘೋಷಿಸಲಿದೆ ಎಂದು ತಿಳಿಸಿದರು.
ರಕ್ಷಣಾ ಕಾರ್ಯ ಮುಂದುವರಿದಿದ್ದು, ಪೊಲೀಸರು ಮತ್ತು ಸೇನಾಪಡೆ ಸ್ಥಳದಲ್ಲಿದೆ. ಸ್ಥಳೀಯರು ಕೂಡ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ಸರ್ಕಾರ ನಿಯಮದಂತೆ ಸೂಕ್ತ ಸಮಯದಲ್ಲಿ ಪರಿಹಾರ ಘೋಷಿಸಲಿದೆ ಎಂದು ಹೇಳಿದರು.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.ಮಂಡಿ ಜಿಲ್ಲಾಡಳಿಕ ಸಹಾಯವಾಣಿಯನ್ನು ಆರಂಭಿಸಿದೆ. ಸಹಾಯವಾಣಿ ಸಂಖ್ಯೆಗಳು: 1905- 226201, 226202, 226203, 1905- 235538 and 094180-01051. 
SCROLL FOR NEXT