ದೇಶ

ಜಮ್ಮು-ಕಾಶ್ಮೀರ: ಶೋಪಿಯಾನ್ ಎನ್ ಕೌಂಟರ್, ಇಬ್ಬರು ಯೋಧರು ಹುತಾತ್ಮ

Sumana Upadhyaya
ಶೋಪಿಯಾನ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭಾರತೀಯ ಸೇನಾ ಯೋಧರು ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಿನ್ನೆ ಸಂಜೆಯಿಂದ ಇಲ್ಲಿ  ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಇಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದ್ದು, ಪ್ರದೇಶವನ್ನು ಸುತ್ತುವರೆಯಲಾಗಿದೆ. ಉಗ್ರರನ್ನು ಹೊಡೆದುರುಳಿಸುವ ಪ್ರಯತ್ನ ಮುಂದುವರಿದಿದೆ.
ಈ ಮಧ್ಯೆ ಮತ್ತೊಂದು ಬೆಳವಣಿಗೆಯಲ್ಲಿ ಭಯೋತ್ಪಾದಕರ ಗುಂಪೊಂದು ಬಂಡಿಪೊರಾದ ಹಾಜಿನ್ ಪ್ರದೇಶದಲ್ಲಿ  ಪೊಲೀಸ್ ಶೋಧನಾ ಸ್ಥಳದಲ್ಲಿ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿದೆ. ಇದರಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಭಯೋತ್ಪಾದಕರನ್ನು ಹಿಡಿಯಲು ಶೋಧ ಕಾರ್ಯ ಮತ್ತು ಪ್ರದೇಶವನ್ನು ಸುತ್ತುವರಿಯುವ ಕೆಲಸವನ್ನು ಪೊಲೀಸರು ಮತ್ತು ಭದ್ರತಾ ಪಡೆ ಯೋಧರು ಆರಂಭಿಸಿದ್ದಾರೆ.
SCROLL FOR NEXT