ಶರದ್ ಯಾದವ್ 
ದೇಶ

ನಾಚಿಕೆಯಿದ್ದರೆ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ; ಶರದ್ ಯಾದವ್'ಗೆ ಜೆಡಿ(ಯು)

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟಿಸುತ್ತಿರುವ ಶರದ್ ಯಾದವ್ ಅವರಿಗೆ ನಾಚಿಕೆ ಇರುವುದೇ ಆದರೆ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿ ಎಂದು ಜೆಡಿಯು ಬಾನುವಾರ ಹೇಳಿದೆ...

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟಿಸುತ್ತಿರುವ ಶರದ್ ಯಾದವ್ ಅವರಿಗೆ ನಾಚಿಕೆ ಇರುವುದೇ ಆದರೆ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿ ಎಂದು ಜೆಡಿಯು ಬಾನುವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಜೆಡಿಯು ನಾಯಕ ಅಜಯ್ ಅಲೋಕ್ ಅವರು, ಹೆಮ್ಮೆಯನ್ನು ಪಕ್ಕಕ್ಕಿಟ್ಟು, ಪಕ್ಷಕ್ಕೆ ಪ್ರಾಮುಖ್ಯತೆ ನೀಡಿ. ಒಂದು ವೇಳೆ ನೀವು ನಿತೀಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದೇ ಆದರೆ, ಮೊದಲು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕೆಂದು ಹೇಳಿದ್ದಾರೆ. 
ಶರದ್ ಯಾದವ್ ಅವರು ಹೆಮ್ಮೆಯನ್ನು ಪಕ್ಕಕ್ಕಿಟ್ಟು, ರಾಜ್ಯಸಭೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕಿದೆ. ಬಿಹಾರ ಜನತೆ ಮಹಾಮೈತ್ರಿ ಸರ್ಕಾರಕ್ಕೆ ಗೌರವವನ್ನು ನೀಡಿತ್ತೇ ವಿನಃ ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳುವುದಕ್ಕಾಗಿ ಅಲ್ಲ. ಹಾಗಾಗಿ ನಾಚಿಕೆಯಿರುವುದೇ ಆದರೆ, ಶರದ್ ಯಾದವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!