ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸ್ವ-ಶೈಲಿಯ ಆಪರೇಷನ್ ಕಮಾಂಡರ್ ಯಾಸಿನ್ ಐಟೂ ಅಲಿಯಾಸ್ ಗಝ್ನವಿ ಸೇರಿದಂತೆ ಮೂವರು ಉಗ್ರರನ್ನು ಭಾನುವಾರ ಎನ್ ಕೌಂಟರ್ ಮಾಡಲಾಗಿದೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಆರಂಭವಾಗಿದ್ದ ಭಾರತೀಯ ಸೇನೆ ಮತ್ತು ಉಗ್ರರ ನಡುವಿನ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಇಬ್ಬರು ಯೋಧರು ಸಹ ಹುತಾತ್ಮರಾಗಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಬಗ್ಗೆ ಸ್ಥಳೀಯ ಪೊಲೀಸರು ನೀಡಿದ ಮಾಹಿತಿ ಆಧರಿಸಿ ವಿಶೇಷ ಕಾರ್ಯಾಚರಣೆ ಪಡೆಯ ಪೊಲೀಸರು ಶೋಫಿಯಾನ ಜಿಲ್ಲೆಯ ಅವ್ನಿರ್ ಗ್ರಾಮದ ಪ್ರದೇಶವನ್ನು ಸುತ್ತುವರೆದು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮಧ್ಯೆ ಮತ್ತೊಂದು ಬೆಳವಣಿಗೆಯಲ್ಲಿ ಭಯೋತ್ಪಾದಕರ ಗುಂಪೊಂದು ಬಂಡಿಪೊರಾದ ಹಾಜಿನ್ ಪ್ರದೇಶದಲ್ಲಿ ಪೊಲೀಸ್ ಶೋಧನಾ ಸ್ಥಳದಲ್ಲಿ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿದೆ. ಇದರಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.