ಯೋಗಿ ಆದಿತ್ಯಾನಾಥ್ 
ದೇಶ

ಗೋರಕ್ ಪುರ ಆಸ್ಪತ್ರೆ ದುರಂತ: ಕಣ್ಣೀರಿಟ್ಟ ಯೋಗಿ, ವಸ್ತುಸ್ಥಿತಿ ವರದಿ ಮಾಡುವಂತೆ ಮಾಧ್ಯಮಕ್ಕೆ ಸೂಚನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ 70 ಮುಗ್ದ ಮಕ್ಕಳನ್ನು ಬಲಿ ಪಡೆದ ಗೋರಕ್'ಪುರ ಆಸ್ಪತ್ರೆ ದುರಂತ...

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ 70 ಮುಗ್ದ ಮಕ್ಕಳನ್ನು ಬಲಿ ಪಡೆದ ಗೋರಕ್'ಪುರ ಆಸ್ಪತ್ರೆ ದುರಂತ ನೆನೆದು ಕಣ್ಣೀರಿಟ್ಟಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ವಸ್ತುಸ್ಥಿತಿಯನ್ನು ವರದಿ ಮಾಡುವಂತೆ ಮಾಧ್ಯಮಗಳಿಗೆ ಕೇಳಿಕೊಂಡಿದ್ದಾರೆ.
ಇಂದು ಬಾಬಾ ರಾಘವ್ ದಾಸ್ ಕಾಲೇಜ್ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಬಳಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶ ಸಿಎಂ, ಆ ಮಕ್ಕಳ ಬಗ್ಗೆ ನನಗಿಂತ ಯಾರೂ ಹೆಚ್ಚು ಸೂಕ್ಷ್ಮತೆಯನ್ನು ಹೊಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ನಾವು ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಘಟನೆಗೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೂ ಮಕ್ಕಳ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಕೇಂದ್ರದ ಪ್ರತಿನಿಧಿಯಾಗಿ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಕಳುಹಿಸಿದ್ದು, ಕೇಂದ್ರದ ಅಧಿಕಾರಿಗಳಿಗೆ ಎಲ್ಲಾ ರೀತಿಯ ತುರ್ತು ನೆರವು ನೀಡಲು ಸೂಚನೆ ನೀಡಿದ್ದಾರೆ ಎಂದು ಯೋಗಿ ತಿಳಿಸಿದ್ದಾರೆ.
ಇದೇ ವೇಳೆ ಆಮ್ಲಜನಕದ ಪೂರೈಕೆಯಲ್ಲಿ ಆದ ವ್ಯತ್ಯಯದಿಂದ ಮಕ್ಕಳು ಮೃತಪಟ್ಟಿದ್ದಾರೆ ಎಂಬ ವರದಿಗಳನ್ನು ಯೋಗಿ ಆದಿತ್ಯನಾಥ್ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಮಿದುಳಿನ ಉರಿಯೂತದಿಂದಾಗಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ