ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಸ್ಸಾಂ, ಬಿಹಾರದಲ್ಲಿ ಪ್ರವಾಹ; 110 ಜನರ ಸಾವು, 22 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತ

ಅಸ್ಸಾಂ ಮತ್ತು ಬಿಹಾರದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಈವರೆಗೂ ಸುಮಾರು 110 ಜನರು ಸಾವನ್ನಪ್ಪಿದ್ದು, ಸುಮಾರು 22 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಹ ಪೀಡಿತ ಅಸ್ಸಾಂ
Srinivasa Murthy VN
Updated On : 14 Aug 2017, 5:29 am

ನವದೆಹಲಿ: ಅಸ್ಸಾಂ ಮತ್ತು ಬಿಹಾರದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಈವರೆಗೂ ಸುಮಾರು 110 ಜನರು ಸಾವನ್ನಪ್ಪಿದ್ದು, ಸುಮಾರು 22 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಸ್ಸಾಂ ಮತ್ತು ಬಿಹಾರದ ಒಟ್ಟು 21 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಭಾನುವಾರ ಒಂದೇ ದಿನ ಸುಮಾರು 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅದರೊಂದಿಗೆ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ  110ಕ್ಕೇರಿದ್ದು, 22.5 ಲಕ್ಷ ಮಂದಿ ಸೂರು ಕಳೆದುಕೊಂಡಿದ್ದಾರೆ. ಈ ವರ್ಷ ಅಸ್ಸಾಂನಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 99ಕ್ಕೇರಿಕೆಯಾಗಿದ್ದು, ಬ್ರಹ್ಮಪುತ್ರ ಸೇರಿದಂತೆ ಎಲ್ಲ 10 ನದಿಗಳೂ ಕೂಡ ಅಪಾಯದ ಮಟ್ಟ ಮೀರಿ  ಹರಿಯುತ್ತಿವೆ. ಏತನ್ಮಧ್ಯೆ ಸತತವಾಗಿ ಸುರಿಯುತ್ತಿರುವ ಮಳೆ ಕೂಡ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದ್ದು, ಪ್ರವಾಹದ ಮಟ್ಟ ಏರಿಕೆಯಾಗತೊಡಗಿದೆ.

ಪ್ರಮುಖ ಪ್ರವಾಸಿ ತಾಣಗಳಾದ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ, ಪೊಬಿಟೋರಾ ವನ್ಯಜೀವಿ ಅಭಯಾರಣ್ಯ ಮತ್ತು ಲಾಖುವಾ ವನ್ಯಜೀವಿ ಅಭಯಾರಣ್ಯಗಳು ದ್ವೀಪಗಳಾಗಿ ಮಾರ್ಪಟ್ಟಿದ್ದು, ಅಸ್ಸಾಂನಮ ದುಬ್ರಿಯಲ್ಲಿ ಅತೀ  ಹೆಚ್ಚು ಅಂದರೆ 3.98 ಲಕ್ಷ ಮಂದಿ ಸೂರು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತೆಯೇ ಮೊರಿಗಾಂ ನಲ್ಲಿ ಒಟ್ಟು 3.14 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ಅಸ್ಸಾಂ ಸರ್ಕಾರದ ವರದಿಗಳು ಹೇಳುತ್ತಿವೆ. ಇನ್ನು ಅಸ್ಸಾಂ ಮತ್ತು  ಬಿಹಾರದಲ್ಲಿ ಸುಮಾರು 22 ರೈಲುಗಳ ಸಂಚಾರ ಸ್ಥಗಿತವಾಗಿದ್ದು, 14ಕ್ಕೂ ವಿವಿಧ ನಿಲ್ದಾಣಗಳಲ್ಲಿ ರೈಲು ಸೇವೆ ಅಸ್ತವ್ಯಸ್ಥಗೊಂಡಿದೆ.

ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಲ್ ಅವರು ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವರದಿ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments