ದೇಶ

ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಜೆಕೆಎಲ್ಎಫ್ ಮುಖ್ಯಸ್ಥ ಯಾಸಿನ್ ಮಲಿಕ್ ಬಂಧನ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಲ್ಎಫ್) ಅಧ್ಯಕ್ಷ ಮೊಹಮ್ಮದ್ ಯಾಸಿನ್ ಮಲಿಕ್ ಅವರನ್ನು ಸೋಮವಾರ ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ನಿನ್ನೆ ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಯಾಸಿನ್ ಯಟ್ಟೂ ಶವ ಸಂಸ್ಕಾರದಲ್ಲಿ ಭಾಗವಹಿಸುವುದಕ್ಕಾಗಿ ಬದ್ಗಾಮ್ ಜಿಲ್ಲೆಯ ನಗಮ್ ಗೆ ತೆರಳುತ್ತಿದ್ದ ಮಲಿಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜೆಕೆಎಲ್ಎಫ್ ಮೂಲಗಳು ತಿಳಿಸಿವೆ.
ಯಾಸಿನ್ ಮಲಿಕ್ ನನ್ನು ಚದೂರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.
SCROLL FOR NEXT