ಸಾಂದರ್ಭಿಕ ಚಿತ್ರ 
ದೇಶ

ಚಂಡೀಗಢದಲ್ಲಿ ಸ್ವಾತಂತ್ರ್ಯ ದಿನದಂದೇ 12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯೊಬ್ಬಳ....

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಹೇಯ ಘಟನೆ ಮಂಗಳವಾರ ನಡೆದಿದೆ. 
ಇಂದು ಬೆಳಗ್ಗೆ ಸ್ವಾಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು40 ವರ್ಷದ ಕಾಮುಕನೊಬ್ಬ ಮಕ್ಕಳ ಪಾರ್ಕ್‌ ಗೆ ಎಳೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಘಟನೆಯ ಬಳಿಕ ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದು, ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. 
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿರುವುದಾಗಿ ಮತ್ತು ಪಾರ್ಕ್‌ ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಬ್ ಇನ್ಸ್ ಪೆಕ್ಟರ್ ಕುಲದೀಪ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT