ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್
ಪಾಲಕ್ಕಾಡ್; 71ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇರಳದ ಶಾಲೆಯೊಂದರಲ್ಲಿ ರಾಷ್ಟ್ರಧ್ವಜ ಹಾರಿಸಲು ಹೋಕಿದ್ದ ರಾಷ್ಟ್ರೀಯ ಸ್ವಯಂ ಸೇವಕ (ಆರ್'ಎಸ್ಎಸ್) ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಂಗಳವಾರ ತಿಳಿದುಬಂದಿದೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕರ್ನಾಕ್ಕಿಯಮ್ಮನ್ ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಿಸಲು ಮೋಹನ್ ಭಾಗವತ್ ಅವರನ್ನು ಆಹ್ವಾನಿಸಲಾಗಿತ್ತು. ಇದರಂತೆ ರಾಷ್ಟ್ರಧ್ವಜ ಹಾರಿಸಲು ಹೋಗಿದ್ದ ಭಾಗವತ್ ಅವರ ಮೇಲೆ ಧ್ವಜಾರೋಹಣ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿದುಬಂದಿದೆ.
ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಶಾಲೆಗೆ ಸೂಚನೆ ನೀಡಿದ್ದು, ಅನುದಾನಿತ ಶಾಲೆಯೊಂದರಲ್ಲಿ ರಾಜಕೀಯ ವ್ಯಕ್ತಿಯೊಬ್ಬರು ರಾಷ್ಟ್ರಧ್ವಜ ಹಾರಿಸುವುದು ಸರಿಯಲ್ಲ. ಶಿಕ್ಷಕರು ಅಥವಾ ಜನರನ್ನು ಪ್ರತಿನಿಧಿಸುವ ವ್ಯಕ್ತಿ ಮಾತ್ರ ರಾಷ್ಟ್ರಧ್ವಜ ಹಾರಿಸುವುದಕ್ಕೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಘಟನೆಗೆ ಘಟನೆ ವ್ಯಕ್ತಪಡಿಸಿರುವ ಭಾರತೀಯ ಜನತಾ ಪಕ್ಷ, ಜಿಲ್ಲಾಧಿಕಾರಿಗಳು ನಿರ್ಧಾರಕ್ಕೆ ಸವಾಲೊಡ್ಡಿ ಭಾಗವತ್ ಅವರು ರಾಷ್ಟ್ರಧ್ವಜನ್ನು ಹಾರಿಸುತ್ತಾರೆಂದು ಹೇಳಿಕೊಂಡಿದೆ.