ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ 
ದೇಶ

ಕಾಶ್ಮೀರ ಕುರಿತು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಒಮರ್ ಅಬ್ದುಲ್ಲಾ ಕಿಡಿ

71ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕಾಶ್ಮೀರ ಬಿಕ್ಕಟ್ಟು ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ...

ನವದೆಹಲಿ: 71ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕಾಶ್ಮೀರ ಬಿಕ್ಕಟ್ಟು ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಮಂಗಳವಾರ ಕಿಡಿಕಾರಿದ್ದಾರೆ. 
ಮೋದಿಯವರ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಾಶ್ಮೀರ ಬಿಕ್ಕಟ್ಟು ಗುಂಡುಗಳಿಂದಾಗಲೂ ಅಥವಾ ಬೈಗುಳಗಳಿಂದಾಗಲೀ ಬಗೆಹರಿಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಕಾಶ್ಮೀರದಲ್ಲಿ ಒಂದೆಡೆ ಉಗ್ರರು ಗುಂಡು ಹಾರಿಸುತ್ತಿದ್ದಾರೆ, ಮತ್ತೊಂದೆಡೆ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸುತ್ತಿದ್ದಾರೆ, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಘರ್ಷಣೆಗಳಿಂದಾಗಿ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಹೇಳಿದ್ದಾರೆ. 
ನೋಟು ನಿಷೇಧ ಬಳಿಕ ಕಪ್ಪುಹಣ ಸಂಪೂರ್ಣವಾಗಿ ಭಾರತಕ್ಕೆ ಬರಲಿದೆ ಎಂದು ಮೋದಿಯವರು ಹೇಳಿದ್ದರು. ಇದೀಗ ಆರ್'ಬಿಐ ನಿಷೇಧಿತ ನೋಟುಗಳ ಎಣಿಕೆ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳುತ್ತಿದೆ. ಆದರೆ, ಈ ಮೊದಲು ಕೇಂದ್ರ ನೀಡಿದ್ದ ಅಂಕಿ ಅಂಶಕ್ಕೂ ಇದೀಗ ಆರ್'ಬಿಐ ಅಧಿಕಾರಿಗಳು ನೀಡುತ್ತಿರುವ ಅಂಕಿ ಅಂಶಕ್ಕೂ ಒಂದಕ್ಕೊಂದು ಹೋಲಿಕೆಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 
71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ಮೋದಿಯವರು, ಗುಂಡುಗಳಾಗಲೀ ಅಥವಾ ಬೈಗುಗಳಿಂದಾಗಲೀ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ. ಕೇವಲ ಪ್ರೀತಿಯಿಂದ ಮಾತ್ರ  ಬಿಕ್ಕಟ್ಟು ಬಗೆಹರಿಯಲು ಸಾಧ್ಯ. ಕಾಶ್ಮೀರ ಸಮಸ್ಯೆಗೆ ಬಗೆಹರಿಸಲು ಬಂದೂಕುಗಳು ಬೇಕಿಲ್ಲ, ಪರಸ್ಪರ ಅಪ್ಪುಗೆಯೇ ಸಾಕು ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!