ನವದೆಹಲಿ: ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಭಾಶಯಗಳನ್ನು ತಿಳಿಸಿರುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಲು ದೂರವಾಣಿ ಕರೆ ಮಾಡಿದ್ದರು. ಅವರಿಗೆ ನನ್ನ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.