ನವದೆಹಲಿ: 1984 ರ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದ 199 ಪ್ರಕರಣಗಳನ್ನು ವಜಗೊಳಿಸುವ ಸಂಬಂಧ ನಿರ್ಧಾರ ಕೈಗೊಳ್ಳಲು ಸುಪ್ರೀಂ ಕೋರ್ಟ್ ಎಸ್ಐಟಿ ರಚಿಸಿದೆ.
ಸುಪ್ರೀಂ ಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳನ್ನೊಳಗೊಂಡ ಎಸ್ಐಟಿಯನ್ನು ರಚಿಸಿದ್ದು, ಪರಿಶೀಲನೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿದ್ದು ನ.28 ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ. ನ್ಯಾ.ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. 1986 ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಪ್ರಮೋದ್ ಆಸ್ಥಾನ ನೇತೃತ್ವ ಇರಲಿದೆ.