ರೋಹಿತ್ ವೇಮುಲ 
ದೇಶ

ರೋಹಿತ್ ವೇಮುಲ ಕೇಸ್: ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ; ತನಿಖಾ ಆಯೋಗ

ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ...

ಹೈದರಾಬಾದ್ :  ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಗೆ ವಯಕ್ತಿಕ ಸಮಸ್ಯೆೆಗಳೇ ಕಾರಣ ಎಂದು  ಪ್ರಕರಣ ಸಂಬಂಧ ಮಾನವ ಸಂಪನ್ಮೂಲ ಇಲಾಖೆ ನೇಮಿಸಿದ್ದ ತನಿಖಾ ಆಯೋಗ ಹೇಳಿದೆ.
ಹೈದರಾಬಾದ್ ವಿಶ್ವ ವಿದ್ಯಾನಿಲಯ ಕೈಗೊಂಡ ಕ್ರಮದಿಂದ ಆತ್ಮಹತ್ಯೆಗೆ ಶರಣಾಗಿಲ್ಲ, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಿವೃತ್ತ ಜಸ್ಟೀಸ್ ಎಕೆ ರೂಪಾನ್ವಾಲ್ ಆಯೋಗ ತಿಳಿಸಿದೆ.
ರೋಹಿತ್ ವೇಮುಲಾ ಅವರನ್ನು ಹಾಸ್ಟೆಲ್ ನಿಂದ ಹೊರ ಹಾಕಿದ್ದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆತ ಹಲವಾರು ಕಾರಣಗಳಿಂದ ಅಸಮಾಧಾನಗೊಂಡಿದ್ದ. ರೋಹಿತ್ ವೇಮುಲಾ ವಯಕ್ತಿಕ ಸಮಸ್ಯೆಗಳಿಗೆ ಸಿಲುಕಿ ಹಾಕಿಕೊಂಡಿದ್ದ ಎಂಬುದು ಆತನ ಸೂಸೈಡ್ ನೋಟ್ ನಲ್ಲಿ ದಾಖಲಿಸಿದ್ದ ಅಂಶಗಳಿಂದ ತಿಳಿದು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆತನ ಸೂಸೈಡ್ ನೋಟ್ ನಲ್ಲಿ ಆತನ ಸಾವಿಗೆ ಕಾರಣರಾದವರು ಯಾರು ಎಂಬುದರ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಆಯೋಗ ಹೇಳಿದೆ.
2016 ರ ಜನವರಿಯಲ್ಲಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಾನವಸಂಪನ್ಮೂಲ ಸಚಿವಾಲಯ ಜಸ್ಟೀಸ್ ರೂಪಾನ್ವಾಲ್ ಆಯೋಗವನ್ನು ರಚಿಸಿತ್ತು. ವೇಮುಲಾ ಕುಟುಂಬದ ಸದಸ್ಯರು, ರಾಜಕೀಯದ ಜತೆ ನಂಟು ಹೊಂದಿರುವ ಗೆಳೆಯರು ಆತಮ ಆತ್ಮಹತ್ಯೆಗೆ ವಿವಿ ಆಡಳಿತ ಮಂಡಳಿಯೆ ಕಾರಣ ಎಂದು ಆರೋಪಿಸಿದ್ದರು. ಆದರೆ ತನಿಖಾ ಆಯೋಗದ ವರದಿಯಲ್ಲಿ ರೋಹಿತ್ ಆತ್ಮಹತ್ಯೆಗೂ ವಿವಿ ಆಡಳಿತ ಮಂಡಳಿಗೂ ಯಾವುದೇ ಸಂಬಂಧ ವಿಲ್ಲ ಎಂದು ಹೇಳುವ ಮೂಲಕ, ಕೇಂದ್ರ ಸಚಿವರುಗಳಾದ ಸ್ಮೃತಿ ಇರಾನಿ ಮತ್ತು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರಿಗೆ ಕ್ಲೀನ್ ಚಿಟ್  ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ