ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಧ್ವಂಸ 
ದೇಶ

ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಧ್ವಂಸ ಪ್ರಕರಣ: 2 ಆರೋಪಿಗಳ ಬಂಧನ

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಧ್ವಂಸ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ...

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಧ್ವಂಸ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಧ್ವಜಾರೋಹಣ ನೆರವೇರಿಸಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವಣಗೊಳಿಸಲಾಗಿತ್ತು. ಪ್ರತಿಮೆ ಧ್ವಂಸಗೊಂಡಿರುವ ವಿಚಾರ ನಿನ್ನೆ ಬೆಳಿಗ್ಗೆ ಬಹಿರಂಗಗೊಂಡಿತ್ತು. ಕೆಲ ದುಷ್ಕರ್ಮಿಗಳು ಪ್ರತಿಮೆ ಮೇಲೆ ಮಸಿ ಸುರಿದು ಪ್ರತಿಮೆಯನ್ನು ವಿರೂಪಗೊಳಿಸಿದ್ದರು.  ಪ್ರಕರಣ ದಾಖಲಿಸಿಕೊಂಡಿದ್ದ ಖೈರಾಸೋಲ್ ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದರು. 
ಇದರಂತೆ ಕಳೆದ ರಾತ್ರಿ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. 
ಪ್ರತಿಮೆಯ ಮೇಲೆ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿಯೇ ಡಾಂಬರು ಸುರಿದಿದ್ದಾರೆ. ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ಡಿಎಸ್ ಪಿ ಎನ್. ಸುಧೀರ್ ಕುಮಾರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ