ಲಕ್ನೋ: ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯ ಅಶೋಕ್ ಬಾಜಪೈ ಮತ್ತು ಎಸ್ ಪಿ ಹಿರಿಯ ಮುಖಂಡರಾದ ಶ್ವೇತ ಸಿಂಗ್ ಮತ್ತಿತರರು ಬಿಜೆಪಿ ಸೇರಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ಕಲ್ರಾಜ್ ಮಿಶ್ರಾ, ಮತ್ತು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಎಸ್ ಪಿ ಮುಖಂಡರು ಬಿಜೆಪಿ ಸೇರಿದ್ದರಿಂದ ಪಕ್ಷದ ಶಕ್ತಿ ಮತ್ತಷ್ಟು ಹೆಚ್ಚಿತು ಎಂದು ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.