ಕೇಂದ್ರ ಗೃಹ ಸಚಿಚ ರಾಜನಾಥ ಸಿಂಗ್ 
ದೇಶ

ಎನ್ಐಎ ಕ್ರಮದಿಂದಾಗಿ ಕಾಶ್ಮೀರದಲ್ಲಿ ಕಲ್ಲು ತೂರಾಟ ಕಡಿಮೆಯಾಗಿದೆ: ರಾಜನಾಥ್ ಹೇಳಿಕೆಗೆ ಬಿಜೆಪಿ ಬೆಂಬಲ

ರಾಷ್ಟ್ರೀಯ ತನಿಖಾ ದಳದ ಕ್ರಮದಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ಕಡಿಮೆಯಾಗಿದೆ ಎಂಬ ಕೇಂದ್ರ ಗೃಹ ಸಚಿಚ ರಾಜನಾಥ ಸಿಂಗ್ ಅವರ ಹೇಳಿಕೆಗೆ ಬಿಜೆಪಿ ಸೋಮವಾರ...

ನವದೆಹಲಿ: ರಾಷ್ಟ್ರೀಯ ತನಿಖಾ ದಳದ ಕ್ರಮದಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ಕಡಿಮೆಯಾಗಿದೆ ಎಂಬ ಕೇಂದ್ರ ಗೃಹ ಸಚಿಚ ರಾಜನಾಥ ಸಿಂಗ್ ಅವರ ಹೇಳಿಕೆಗೆ ಬಿಜೆಪಿ ಸೋಮವಾರ ಬೆಂಬಲ ವ್ಯಕ್ತಪಡಿಸಿದೆ. 
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಜಿ.ವಿ.ಎಲ್ ನರಸಿಂಹನ್ ರಾವ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದರು. ವಿಚಾರ ಬಹಿರಂಗಗೊಳ್ಳುತ್ತಿದ್ದಂತೆಯೇ ಪ್ರತ್ಯೇಕತಾವಾದಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಣಾಮಕಾರಿ ಕಾರ್ಯಾಚರಣೆಗಳನ್ನು ನಡೆಸಿದ್ದರು. ಜಾರಿ ನಿರ್ದೇಶನಾಲಯ ಹಾಗೂ ಇತರೆ ಸಂಸ್ಥೆಗಳು ಪ್ರತ್ಯೇಕತಾವಾದಿಗಳ ಮೇಲೆ ದಾಳಿ ನಡೆಸಿರುವುದು ಇಂದು ಕಾಶ್ಮೀರದಲ್ಲಿ ಧನಾತ್ಮಕ ಪರಿಣಾಮಗಳು ಕಾಣುವಂತಾಗಿದೆ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ಕಾಶ್ಮೀರ ಕುರಿತಂತೆ ಮಾತನಾಡಿದ್ದ ರಾಜನಾಥ ಸಿಂಗ್ ಅವರು, ಎನ್ಐಎ ಕಾರ್ಯಾಚರಣೆಗಳಿಂದಾಗಿ ಕಲ್ಲು ತೂರಾಟ ಪ್ರಕರಣಗಳು ಕಡಿಮೆಯಾಗಿದೆ. ದೇಶದ ಭದ್ರತೆಗೆ ನಾವು ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದು, ಇದಕ್ಕಾಗಿ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈಗಾಗಲೇ ನಾವು ಹಲವು ಸವಾಲುಗಳನ್ನು ಸ್ವೀಕರಿಸಿದ್ದು, ಕಳೆದ ಮೂರು ವರ್ಷಗಳಿಂದ ನಕ್ಸಲ್, ಭಯೋತ್ಪಾದನೆ ಮತ್ತು ಉಗ್ರ ವಾದಗಳು ಕಡಿಮೆಯಾಗಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ