ಬೆಂಗಳೂರು: ಅಬಕಾರಿ ಪರವಾನಗಿಯನ್ನು ಪುನರ್ನವೀಕರಣಗೊಳಿಸುವುದಕ್ಕಾಗಿ ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಲು ಕರ್ನಾಟಕ ಬಾರ್ ಮಾಲೀಕರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ನ್ಯಾ. ವಿನೀತ್ ಕೋಠಾರಿ ಅರ್ಜಿಗಳನ್ನು ವಜಾಗೊಳಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ನ್ಯಾಯವ್ಯಾಪ್ತಿಯನ್ನು ಮೀರಿ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ನಗರಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಲು ನಿರಾಕರಿಸಿದ್ದ ಕೇಂದ್ರ ಸುಪ್ರೀಂ ಕೋರ್ಟ್ ಆದೇಶ ಹಾಗೂ ತಾಂತ್ರಿಕ ಕಾರಣಗಳನ್ನು ನೀಡಿತ್ತು.
ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ 500ಮೀ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ನಗರಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಲು ರಾಜ್ಯ ಸರ್ಕಾರ ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿತ್ತು.