ಸಂಗ್ರಹ ಚಿತ್ರ 
ದೇಶ

ಬಹುಮತ ಸಾಬೀತು ಪಡಿಸುವಂತೆ ಪಳನಿಸ್ವಾಮಿಗೆ ಸೂಚಿಸಿ: ರಾಜ್ಯಪಾಲರಿಗೆ ಸ್ಟಾಲಿನ್ ಪತ್ರ

ತಮಿಳುನಾಡು ಸಿಎಂ ಕೆ ಪಳನಿ ಸ್ವಾಮಿ ಅವರು ಶಾಸಕರ ವಿಶ್ವಾಸ ಕಳೆದುಕೊಂಡಿದ್ದು, 19 ಶಾಸಕರು ಬೆಂಬಲ ವಾಪಸ್ ಪಡೆದಿರುವ ಹಿನ್ನಲೆಯಲ್ಲಿ ಕೂಡಲೇ ಅವರಿಗೆ ವಿಶ್ವಾಸ ಮತ ಯಾಚಿಸುವಂತೆ ಸೂಚಿಸಬೇಕು ಎಂದು ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ: ತಮಿಳುನಾಡು ಸಿಎಂ ಕೆ ಪಳನಿ ಸ್ವಾಮಿ ಅವರು ಶಾಸಕರ ವಿಶ್ವಾಸ ಕಳೆದುಕೊಂಡಿದ್ದು, 19 ಶಾಸಕರು ಬೆಂಬಲ ವಾಪಸ್ ಪಡೆದಿರುವ ಹಿನ್ನಲೆಯಲ್ಲಿ ಕೂಡಲೇ ಅವರಿಗೆ ವಿಶ್ವಾಸ ಮತ ಯಾಚಿಸುವಂತೆ ಸೂಚಿಸಬೇಕು ಎಂದು  ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಈ ಬಗ್ಗೆ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರಿಗೆ ಪತ್ರವೊಂದನ್ನು ಬರೆದಿರುವ ಸ್ಟಾಲಿನ್ ಅವರು, ಆಡಳಿತಾ ರೂಢ ಎಐಎಡಿಎಂಕೆ ಪಕ್ಷದಲ್ಲಿನ ಆಂತರಿಕ ಕತ್ತಾಟದಿಂದಾಗಿ ಆಡಳಿತ ಯಂತ್ರ ಕುಸಿದಿದೆ. ಇದೀಗ ಅದೇ ಪಕ್ಷದ 19  ಶಾಸಕರು ಪಳನಿ ಸ್ವಾಮಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ. ಹೀಗಾಗಿ ಸಿಎಂ ಪಳನಿ ಸ್ವಾಮಿ ಶಾಸಕರ ವಿಶ್ವಾಸ ಕಳೆದುಕೊಂಡಿದ್ದು, ಅವರ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಹೀಗಾಗಿ ತಾವು ವಿಶೇಷ  ಅಧಿವೇಶನ ಕರೆದು ಕೆ ಪಳನಿ ಸ್ವಾಮಿ ಅವರಿಗೆ ಕೂಡ ವಿಶ್ವಾಸ ಮತ ಯಾಚಿಸಿ ಬಹುಮತ ಸಾಬೀತು ಪಡಿಸುವಂತೆ ಸ್ಟಾಲಿನ್ ಕೋರಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸ್ಟಾಲಿನ್ ಅವರು, ಪ್ರಸ್ತುತ 19 ಮಂದಿ ಶಾಸಕರು ತಮ್ಮ ಬೆಂಬಲ ವಾಪಸ್ ಪಡೆದಿದ್ದಾರೆ. ನಮಗೆ ಲಭ್ಯವಾದ ಮೂಲಗಳ ಪ್ರಕಾರ ಇನ್ನೂ 3-4 ಎಐಎಡಿಎಂಕೆ ಶಾಸಕರು  ಬೆಂಬಲ ವಾಪಸ್ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಪಳನಿ ಸ್ವಾಮಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ