ದೇಶ

ತ್ರಿವಳಿ ತಲಾಖ್ ತೀರ್ಪು ಐತಿಹಾಸಿಕ: ಪ್ರಧಾನಿ ನರೇಂದ್ರ ಮೋದಿ

Srinivas Rao BV
ನವದೆಹಲಿ: ತ್ರಿವಳಿ ತಲಾಖ್ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಐತಿಹಾಸಿಕ ತೀರ್ಪು ಎಂದು ಬಣ್ಣಿಸಿದ್ದಾರೆ. ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ನ ತೀರ್ಪಿನಿಂದ ಮುಸ್ಲಿಮ್ ಮಹಿಳೆಯರಿಗೆ ಸಮಾನತೆ ಸಿಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. 
ಸುಪ್ರೀಂ ಕೋರ್ಟ್ ನ ತೀರ್ಪು ಮುಸ್ಲಿಮ್ ಮಹಿಳೆಯರ ಸಬಲೀಕರಣ ಸಾಧ್ಯವಾಗಲಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ತ್ರಿವಳಿ ತಲಾಖ್ ಬಗ್ಗೆ ಬಹುನಿರೀಕ್ಷಿತ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದ್ದು, ಮುಸ್ಲಿಂ ವೈಯುಕ್ತಿಕ ಕಾನೂನಿಗೆ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್  ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸಿದೆ. 
SCROLL FOR NEXT