ಅರುಣ್ ಜೇಟ್ಲಿ-ಅರವಿಂದ್ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ವಿರುದ್ಧ ಸುಳ್ಳು ಅಫಿಡವಿಟ್ ಕೇಸು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರುಣ್ ಜೇಟ್ಲಿ ಅರ್ಜಿ

ದೆಹಲಿ ಹೈಕೋರ್ಟ್ ಗೆ ಸಲ್ಲಿಸಿರುವ ಸುಳ್ಳು ಅಫಿಡವಿಟ್ಟಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್...

ನವದೆಹಲಿ: ದೆಹಲಿ ಹೈಕೋರ್ಟ್ ಗೆ ಸಲ್ಲಿಸಿರುವ ಸುಳ್ಳು ಅಫಿಡವಿಟ್ ಕೇಸಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸುಳ್ಳು ಅಫಿಡವಿಟ್ಟು ವಿಚಾರಣೆ (perjury proceedings) ನಡೆಸುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಜೇಟ್ಲಿಯವರನ್ನು ಪಾಟೀ ಸವಾಲು ನಡೆಸುವ ವೇಳೆ ನಿಂದನೆಯ ಭಾಷೆ ಬಳಸಬಾರದೆಂದು ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಅವರಿಗೆ ಸೂಚನೆ ನೀಡಿಲ್ಲವೆಂದು ಕೇಜ್ರಿವಾಲ್ ಹೇಳಿದ್ದರು.
ಆದರೆ ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆಕ್ಷೇಪಾರ್ಹ ಪದ ಬಳಸಲಾಗಿದ್ದು, ಅದು ತಪ್ಪು ಎಂದು ಅರುಣ್ ಜೇಟ್ಲಿಯವರು ನ್ಯಾಯಾಲಯಕ್ಕೆ ಕೇಜ್ರಿವಾಲ್ ವಿರುದ್ಧ ನಿಂದನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಪ್ರತಿಕ್ರಿಯಿಸುವಂತೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಪ್ರತಿವಾದಿಯ ವಕೀಲರಿಂದ ವಾಗ್ದಾಳಿ ಮಾಡಲು ಯಾವುದೇ ಹಗರಣ ಅಥವಾ ನಿಂದನೀಯ ಪ್ರಶ್ನೆಯನ್ನು ಕೇಳಬಾರದೆಂದು ನ್ಯಾಯಾಲಯ ಕೇಜ್ರಿವಾಲ್ ಅವರಿಗೆ ಆದೇಶ ನೀಡಿತ್ತು.
ವಿಚಾರಣೆ ವೇಳೆ ನ್ಯಾಯಾಲಯ, ವ್ಯಕ್ತಿಯ ಪರ ವಕೀಲ ವಾದ ಮಾಡುವ ಸಂದರ್ಭದಲ್ಲಿ ನಿಂದನಾತ್ಮಕ ಶಬ್ದ ಅಥವಾ ಭಾಷೆ ಬಳಸಿದರೆ ಅದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವುದಿಲ್ಲವೇ, ಇಂತವರು ಸಾಮಾನ್ಯ  ಜನತೆಗೆ ಹೇಗೆ ಮಾದರಿಯಾಗುತ್ತಾರೆ ಎಂದು ಪ್ರಶ್ನಿಸಿದೆ.
ತಮ್ಮ ವಿರುದ್ಧ ಏಕೆ ಮಾನನಷ್ಟ ಮೊಕದ್ದಮೆ ಹೂಡಬಾರದೆಂದು ಮತ್ತು ಇದಕ್ಕೆ ಉತ್ತರಿಸುವಂತೆ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ ನೊಟೀಸ್ ಜಾರಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ