ಭುನವೇಶ್ವರ: ಯುವಕರ ಜೀವಕ್ಕೇ ಕುತ್ತಾಗಿರುವ ಬ್ಲೂ ವೇಲ್ ಗೇಮ್ ನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕಲು ಒಡಿಶಾ ಪೊಲೀಸರು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬ್ಲೂ ವೇಲ್ ಗೇಮ್ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಿಸದಂತೆ ಎಚ್ಚರ ವಹಿಸಲು ಒಡಿಶಾ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಬ್ಲೂ ವೇಲ್ ಹೆಸರಿನಲ್ಲಿ ಅಥವಾ ಇನ್ಯಾವುದೇ ಹೆಸರಿನಲ್ಲಿ ಇಂತಹ ಜೀವಘಾತುಕ ಗೇಮ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಒಡಿಶಾ ಡಿಜಿಪಿ ಕೆಬಿ ಸಿಂಗ್ ಹಿರಿಯ ಅಧಿಕಾರಿಗಳಿಗೆ ಕಳಿಸಿರುವ ಅಧಿಸೂಚನೆಯಲ್ಲಿ ಹೇಳಿದ್ದಾರೆ.
ವಿವಿಧ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆಯೂ ಪೊಲೀಸ್ ಇಲಾಖೆ ಸೂಚನೆ ನೀಡಿದೆ.