ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು, ಅಮಿತ್ ಶಾ ಹಾಗೂ ಸ್ಮೃತಿ ಇರಾನಿಯವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕೆಲ ದಿನಗಳ ಹಿಂದಷ್ಟೇ ನಡೆದ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಇಬ್ಬರೂ ಗೆಲವು ಸಾಧಿಸಿದ್ದರು. ಇದರಂತೆ ಅಮಿತ್ ಶಾ, ಸ್ಮೃತಿಯವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಶಾ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ್ದಾರೆ. ಈ ಹಿಂದೆ ಗುಜರಾತ್ ನಲ್ಲಿ ಅಮಿತ್ ಶಾ ಅವರು ಐದು ಬಾರಿ ಶಾಸಕರಾಗಿದ್ದರು..
ಅಮಿತ್ ಶಾ ಅವರು ರಾಜ್ಯಸಭೆಗೆ ಪ್ರವೇಶ ಮಾಡಿರುವುದರಿಂದ ಆಡಳಿತಾರೂಢ ಬಿಜೆಪಿಗೆ ಸಂಸತ್ತಿನಲ್ಲಿ ಮತ್ತಷ್ಟು ಬಲ ಬಂದಂತಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos