ಸಂಗ್ರಹ ಚಿತ್ರ 
ದೇಶ

ರೋಹ್ಟಕ್ ಜೈಲು ತಲುಪಿದ ಬಾಬಾ ರಾಮ್ ರಹೀಮ್; ಭದ್ರತಾ ಮಾಹಿತಿ ಪಡೆದ ರಾಜ್ ನಾಥ್ ಸಿಂಗ್

ಅನುಯಾಯಿಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ದೋಷಿಯಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಗುರ್ಮಿತ್ ಸಿಂಗ್ ಅವರನ್ನು ಬಿಗಿ ಭದ್ರತೆಯಲ್ಲಿ ರೋಹ್ಟಕ್ ನ ಸುನಾರಿಯಾ ಜೈಲಿಗೆ ಕರೆತರಲಾಗಿದೆ.

ಚಂಡೀಘಡ: ಅನುಯಾಯಿಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ದೋಷಿಯಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಗುರ್ಮಿತ್ ಸಿಂಗ್ ಅವರನ್ನು ಬಿಗಿ ಭದ್ರತೆಯಲ್ಲಿ ರೋಹ್ಟಕ್ ನ ಸುನಾರಿಯಾ  ಜೈಲಿಗೆ ಕರೆತರಲಾಗಿದೆ.

ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯದಿಂದ ನೇರವಾಗಿ ರೋಹ್ಟಕ್ ಗೆ ಬಾಬಾ ರಾಮ್ ರಹೀಮ್ ರನ್ನು ಹೆಲಿಕಾಪ್ಟರ್ ಮೂಲಕ ಕರೆತರಲಾಗಿದ್ದು, ಇದೀಗ ಸುನಾರಿಯಾ ಜೈಲಿಗೆ ಕಳುಹಿಸಲಾಗಿದೆ. ಬಾಬಾ ರಾಮ್ ರಹೀಮ್  ಜೈಲು ಸೇರುತ್ತಿದ್ದಂತೆಯೇ ಜೈಲಿನ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಕೇಂದ್ರೀಯ ಮೀಸಲು ಪಡೆ, ಸಿಐಎಸ್ ಎಫ್ ಹಾಗೂ ಬಿಎಸ್ ಎಫ್ ಯೋಧರನ್ನು ರೋಹ್ಟಕ್ ನಲ್ಲಿ ಭದ್ರತೆಗೆ  ನಿಯೋಜಿಸಲಾಗಿದ್ದು, ಇಡೀ ಜೈಲಿಗೆ ಸೇನಾಪಡೆಗಳ ಭದ್ರಕೋಟೆಯನ್ನು ನಿರ್ಮಿಸಲಾಗಿದೆ.

ಇನ್ನು ಪಂಚಕುಲದಲ್ಲಿ ನಡೆದ ಹಿಂಸಾಚಾರಗಲ್ಲಿ ಈ ವರೆಗೂ 13 ಮಂದಿ ಸಾವಿಗೀಡಾಗಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಭದ್ರತಾ ಮಾಹಿತಿ ಪಡೆದ ರಾಜ್ ನಾಥ್ ಸಿಂಗ್
ಏತನ್ಮಧ್ಯೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹಾಗೂ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ಕರೆ ಮಾಡಿದ್ದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಭದ್ರತೆ ಮೇಲ್ವಿಚಾರಣೆ ನಡೆಸಿದರು. ಈ  ವೇಳೆ ಉಭಯ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಅಂತೆಯೇ ಹೆಚ್ಚುವರಿ ಪಡೆಗಳನ್ನು ರವಾನಿಸುವ ಕುರಿತು ಭರವಸೆ ನೀಡಿದರು. ಉಭಯ ರಾಜ್ಯಗಳ  ಮುಖ್ಯಮಂತ್ರಿಗಳು ಕೇಂದ್ರ ಸಚಿವರಿಗೆ ತಾವು ಕೈಗೊಂಡ ಭದ್ರತ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!