ಪುಲ್ವಾಮ ಜಿಲ್ಲಾ ಪೊಲೀಸ್ ಕ್ಯಾಂಪ್ ಮೇಲೆ ಉಗ್ರರ ದಾಳಿ, 8 ಭದ್ರತಾ ಸಿಬ್ಬಂದಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲಾ ಪೊಲೀಸ್ ಕ್ಯಾಂಪ್ ಮೇಲೆ ಶನಿವಾರ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು....
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲಾ ಪೊಲೀಸ್ ಕ್ಯಾಂಪ್ ಮೇಲೆ ಶನಿವಾರ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಎಂಟು ಭದ್ರತಾ ಸಿಬ್ಬಂದಿ ಹುತಾತ್ಮರಾದಿದ್ದಾರೆ.
ಇಂದು ಬೆಳಗ್ಗೆ ಪುಲ್ವಾಮ ಜಿಲ್ಲೆಯ ಜಿಲ್ಲಾ ಪೊಲೀಸ್ ರೇಖೆ (ಡಿಪಿಎಲ್) ಬಳಿ ಬಂದ ಉಗ್ರರ ಗುಂಪೊಂದು ಯೋಧರು ಹಾಗೂ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ನಾಲ್ವರು ಸಿಆರ್ ಪಿಎಫ್ ಸಿಬ್ಬಂದಿ ಹಾಗೂ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಲ್ಲಿ ಅಡಗಿ ಕುಳಿತಿದ್ದು, ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಸ್ಥಳದಲ್ಲಿ ಇನ್ನು ಎರಡು ಅಥವಾ ಮೂವರು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.