ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರಿಂದರ್ ಸಿಂಗ್ 
ದೇಶ

ಸಹಜ ಸ್ಥಿತಿಗೆ ಮರಳಿದ ಪಂಜಾಬ್: ಕರ್ಫ್ಯೂ ಹಿಂಪಡೆದ ಸರ್ಕಾರ

ಸ್ವಯಂಘೋಷಿತ ದೇವ ಮಾನವ ರಾಮ್ ರಹೀಮ್ ಸಿಂಗ್ ಅವರು ದೋಷಿ ಎಂದು ತೀರ್ಪು ಪ್ರಕಟಗೊಂಡ ಬಳಿಕ ಹಿಂಸಾಚಾರಕ್ಕೊಳಗಾಗಿದ್ದ ಪಂಜಾಬ್ ರಾಜ್ಯದಲ್ಲಿ ಇದೀಗ ಪರಿಸ್ಥಿತಿ ಸಹಜ ಸ್ಥಿತಿಯತ್ತ ತಲುಪಿದ್ದು, ಈ ಹಿನ್ನಲೆಯಲ್ಲಿ ಕರ್ಫ್ಯೂವನ್ನು...

ಪಂಜಾಬ್: ಸ್ವಯಂಘೋಷಿತ ದೇವ ಮಾನವ ರಾಮ್ ರಹೀಮ್ ಸಿಂಗ್ ಅವರು ದೋಷಿ ಎಂದು ತೀರ್ಪು ಪ್ರಕಟಗೊಂಡ ಬಳಿಕ ಹಿಂಸಾಚಾರಕ್ಕೊಳಗಾಗಿದ್ದ ಪಂಜಾಬ್ ರಾಜ್ಯದಲ್ಲಿ ಇದೀಗ ಪರಿಸ್ಥಿತಿ ಸಹಜ ಸ್ಥಿತಿಯತ್ತ ತಲುಪಿದ್ದು, ಈ ಹಿನ್ನಲೆಯಲ್ಲಿ ಕರ್ಫ್ಯೂವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ ಎಂದು ಶನಿವಾರ ತಿಳಿದುಬಂದಿದೆ. 
ರಾಜ್ಯದಲ್ಲಿ ಸೃಷ್ಟಿಯಾಗಿದ್ದ ಹಿಂಸಾಚಾರ ಕುರಿತಂತೆ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಈ ಹಿನ್ನಲೆಯಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. 
ರಾಜ್ಯದಲ್ಲಿನ ಪರಿಸ್ಥಿತಿ ಕುರಿತಂತೆ ಡಿಜಿಪಿಯವರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಸ್ತುತ ರಾಜ್ಯ ಸಹಜ ಸ್ಥಿತಿಯತ್ತ ತಲುಪಿದ್ದು, 3 ಜಿಲ್ಲೆಗಳಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ. ಆದರೆ, ರಾಜ್ಯದಲ್ಲಿ 48 ಗಂಟೆಗಳ ಕಾಲ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 
ಶಾಂತಿಯುತ ಕರೆಗೆ ಪಂಜಾಬ್ ರಾಜ್ಯ ಜನತೆ ಸ್ಪಂದನೆ ನೀಡಿದ್ದು, ಜನತೆಗೆ ಈ ಮೂಲಕ ಧನ್ಯವಾದಗಳನ್ನು ಹೇಳುತ್ತೇನೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ