ದೇಶ

ಮಾಂಸ ರಫ್ತು ಉದ್ಯಮಿ ಮೊಯಿನ್‌ ಖುರೇಷಿ ಆ.31ರವರೆಗೆ ಇಡಿ ವಶಕ್ಕೆ

Lingaraj Badiger
ನವದೆಹಲಿ: ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿವಾದಾತ್ಮಕ ಮಾಂಸ ರಫ್ತು ಉದ್ಯಮಿ ಮೊಯಿನ್‌ ಖುರೇಷಿ ಅವರನ್ನು ದೆಹಲಿ ಕೋರ್ಟ್ ಆಗಸ್ಟ್ 31ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗ ವಶಕ್ಕೆ ನೀಡಿ ಶನಿವಾರ ಆದೇಶಿಸಿದೆ.
ನಿನ್ನೆ ರಾತ್ರಿ ಖುರೇಷಿಯನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಅವರು, ಖುರೇಷಿಯನ್ನು 14 ದಿನಗಳ ಕಾಲ ಇಡಿ ವಶಕ್ಕೆ ನೀಡಿದ್ದಾರೆ.
2016ರಲ್ಲಿ ಖುರೇಷಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಶುಕ್ರವಾರ ವಿಚಾರಣೆಗೆಂದು ಕಚೇರಿಗೆ ಕರೆಸಿಕೊಂಡಿದ್ದರು. ಬಳಿಕ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.
ಖುರೇಷಿ ಹವಾಲಾ ಹಣವನ್ನು ದುಬೈ, ಲಂಡನ್ ಸೇರಿದಂತೆ ಯೂರೊಪಿನ ಹಲವು ಭಾಗಗಳಲ್ಲಿ ಹವಾಲಾ ಹಣ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ತನಿಖೆ ನಡೆಸಲಾಗುತ್ತಿದೆ.
SCROLL FOR NEXT