ಟಿಟಿವಿ ದಿನಕರನ್ 
ದೇಶ

ಎಐಎಡಿಎಂಕೆ ಬಿಕ್ಕಟ್ಟು: ಪಕ್ಷದ ಪ್ರಮುಖ ಹುದ್ದೆಯಿಂದ ಮುಖ್ಯ ಸಚೇತಕ ರಾಜೇಂದ್ರನ್ ವಜಾಗೊಳಿಸಿದ ದಿನಕರನ್

ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಸರ್ಕಾರಿ ಮುಖ್ಯ ಸಚೇತಕ ಎಸ್ ರಾಜೇಂದ್ರನ್ ಅವರನ್ನು ಪಕ್ಷದ ಪ್ರಮುಖ...

ಚೆನ್ನೈ: ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಸರ್ಕಾರಿ ಮುಖ್ಯ ಸಚೇತಕ ಎಸ್ ರಾಜೇಂದ್ರನ್ ಅವರನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಶನಿವಾರ ವಜಾಗೊಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ದಿನಕರನ್ ಬೆಂಬಲಕ್ಕೆ ನಿಂತಿದ್ದ 19 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸುವಂತೆ ಪತ್ರ ಬರೆದಿದ್ದ ರಾಜೇಂದ್ರನ್ ಅವರನ್ನು ಇಂದು ಅರಿಯಲೂರ್ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿದೆ. 
ರಾಜೇಂದ್ರನ್ ಅವರನ್ನು ಎಐಎಡಿಎಂಕೆ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿರುವ ದಿನಕರನ್ ಅವರು, ಅವರ ಸ್ಥಾನಕ್ಕೆ ಪಿ ಮುತ್ತಿಯನ್ ಅವರನ್ನು ನೇಮಕ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ವಿರುದ್ಧ ತಿರುಗಿಬಿದ್ದು ದಿನಕರನ್ ಬೆಂಬಲಕ್ಕೆ ನಿಂತಿದ್ದ 19 ಶಾಸಕರನ್ನು ಅನರ್ಹಗೊಳಿಸುವಂತೆ ರಾಜೇಂದ್ರನ್ ಅವರು ಕಳೆದ ಗುರುವಾರ ಸ್ಪೀಕರ್ ಪಿ ಧನಪಾಲ್ ಅವರಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT