ಸಂಗ್ರಹ ಚಿತ್ರ 
ದೇಶ

ಬ್ಲೂವೇಲ್ ಗೇಮ್ ಭೂತ: ಆತ್ಮಹತ್ಯೆಗೆಂದು ಜೈಪುರದಿಂದ ಮುಂಬೈಗೆ ಬಂದಿದ್ದ ಬಾಲಕನ ರಕ್ಷಣೆ

ಬ್ಲೂವೇಲ್ ಆನ್'ಲೈನ್ ಗೇಮ್ ಹುಚ್ಚಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಜೈಪುರದಿಂದ ಮನೆ ಬಿಟ್ಟು ಮುಂಬೈಗೆ ಬಂದಿದ್ದ 16 ವರ್ಷದ ಬಾಲಕನೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ...

ಜೈಪುರ: ಬ್ಲೂವೇಲ್ ಆನ್'ಲೈನ್ ಗೇಮ್ ಹುಚ್ಚಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಜೈಪುರದಿಂದ ಮನೆ ಬಿಟ್ಟು ಮುಂಬೈಗೆ ಬಂದಿದ್ದ 16 ವರ್ಷದ ಬಾಲಕನೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. 
10 ತರಗತಿ ಓದುತ್ತಿರುವ ಬಾಲಕನೊಬ್ಬ ಬ್ಲೂವೇಲ್ ಗೇಮ್ ಆಡುತ್ತಿದ್ದು, ಆಟದ ಕೊನೆಯ ಹಂತದಲ್ಲಿ ನೀಡಲಾಗಿದ್ದ ಟಾಸ್ಕ್ ನ್ನು ಪೂರ್ಣಗೊಳಿಸಲು ಆತ್ಮಹತ್ಯೆ ಮಾಡಿಕೊಳ್ಳಲು ರೈಲು ಹತ್ತಿ ಜೈಪುರದಿಂದ ಮುಂಬೈಗೆ ಬಂದಿದ್ದಾನೆ. 
ಬಾಲಕ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಆತನ ಬಳಿಯಿದ್ದ ಫೋನನ್ನು ಟ್ರ್ಯಾಕ್ ಮಾಡಿದ್ದಾರೆ. ಈ ವೇಳೆ ಬಾಲಕ ಮುಂಬೈನ ಚರ್ಚ್ ಗೇಟ್ ಬಳಿ ಇರುವುದು ಕಂಡು ಬಂದಿದೆ. ಕೂಜಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಶುಕ್ರವಾರ ರಾತ್ರಿ ಬಾಲಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 
ಬಾಲಕನನ್ನು ರಕ್ಷಣೆ ಮಾಡಿದ ಪೊಲೀಸರು ತಪಾಸಣೆ ನಡೆಸಿದಾಗ ಆತನ ಬಳಿ ಚಾಕು ಇರುವುದು ಪತ್ತೆಯಾಗಿದೆ. ಬಾಲಕ ಆತ್ಮಹತ್ಯೆ ಮಾಡಿಕೊಳ್ಳುವ ಹಂತದಲ್ಲಿದ್ದ ಎಂದು ಕರ್ನಿ ವಿಹಾರ್ ಪೊಲೀಸ್ ಠಾಣೆಯ ಮಹಾವೀರ್ ಸಿಂಗ್ ಅವರು ತಿಳಿಸಿದ್ದಾರೆ. ಪ್ರಸ್ತುತ ಬಾಲಕನನ್ನು ಪೊಲೀಸರು ಪೋಷಕರ ವಶಕ್ಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್