ವಿ ಕೆ ಶಶಿಕಲಾ 
ದೇಶ

ಎಐಎಡಿಎಂಕೆಯಿಂದ ಶಶಿಕಲಾ ಉಚ್ಚಾಟನೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ.
ಇಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಶಿಕಲಾ ಅವರನ್ನು ಎಐಎಡಿಎಂಕೆಯಿಂದ ಉಚ್ಚಾಟಿಸುವ ಸಂಬಂಧ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆಯಲು ನಿರ್ಧರಿಸಲಾಗಿದೆ. ಜನರಲ್ ಕೌನ್ಸಿಲ್ ಸಭೆಯಲ್ಲಿ ಶಶಿಕಲಾ ಭವಿಷ್ಯ ನಿರ್ಧಾರವಾಗಲಿದೆ.
ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮಾಡಿದ ಕೆಲವು ನೇಮಕಾತಿಗಳ ಮಾನ್ಯತೆ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಪಕ್ಷದ ಕೆಲವು ಶಾಸಕರು ಮತ್ತು ಸಂಸದರು ಸಭೆಗೆ ಗೈರು ಆಗಿದ್ದರು ಎಂದು ಎಐಎಡಿಎಂಕೆ ಮೂಲಗಳು ತಿಳಿಸಿವೆ.
ಜಯಲಲಿತಾ ನಿಧನದ ನಂತರ ಕಳೆದ ಡಿಸೆಂಬರ್ 29ರಂದು ನಡೆದ ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಶಶಿಕಲಾ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಈ ಮಧ್ಯೆ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿತ 21 ಬಂಡಾಯ ಶಾಸಕರು ಮುಖ್ಯಮಂತ್ರಿ ಪಳನಿಸ್ವಾಮಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel