ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣದ ತ್ವರಿತ ವಿಚಾರಣೆ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಜುಲೈ 26ರಂದು ಹೈಕೋರ್ಟ್ ಏಕ ಸದಸ್ಯ ಪೀಠ ಕೇಜ್ರಿವಾಲ್ ಹಾಗೂ ಎಎಪಿ ನಾಯಕ ಆಶುತೋಷ್ ವಿರುದ್ಧದ ಕ್ರಿಮಿನಲ್ ಮಾನಹಾನಿ ಪ್ರಕರಣದ ತ್ವರಿತ ವಿಚಾರಣೆ ನಡೆಸುವ ನಿರ್ಧಾರ ತೆಗೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕಾರ್ಯಕಾರಿ ಮುಖ್ಯ ನ್ಯಾಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ ಹರಿಶಂಕರ್ ಅವರು, ಇದು 'ತಪ್ಪಾಗಿ ಗ್ರಹಿಕೆ ಮತ್ತು ಅರ್ಹತೆ ಇಲ್ಲದ' ಅರ್ಜಿ ಎಂದು ಹೇಳಿ ವಜಾಗೊಳಿಸಿದ್ದಾರೆ.
ಪ್ರಕರಣಗಳನ್ನು ಗಂಟೆಯ ಲೆಕ್ಕದಲ್ಲಿ ವಿಚಾರಣೆ ನಡೆಸುವ ಅಗತ್ಯವಿದ್ದು, ಎಲ್ಲಾ ಪ್ರಕರಣಗಳಲ್ಲೂ ಇದನ್ನೇ ಅನುಸರಿಸುವಂತೆ ಹೈಕೋರ್ಟ್ ಶಿಫಾರಸು ಮಾಡಿದೆ.
ಆಗಸ್ಟ್ 25ರಂದು ಏಕ ಸದಸ್ಯ ಪೀಠದ ವಿಚಾರಣೆ ಪ್ರಶ್ನಿಸಿದ್ದ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಕೋರ್ಟ್, ಪ್ರಕರಣದ ವಿಚಾರಣೆ ವಿಳಂಬವಾದರೆ ನಾವು ಸುಪ್ರೀಂ ಕೋರ್ಟ್ ಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics