ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎನ್ ಎನ್ ವೊಹ್ರಾ ಅವರು 10 ತಿಂಗಳ ಅವಧಿಗೂ ಮುನ್ನವೇ ಇಂದು ರಾಜಿನಾಮೆ ನೀಡುವ ಸಾಧ್ಯತೆ ಇದೆ ಎಂದು ಸೋಮವಾರ ಮಾಧ್ಯಮಗಳು ವರದಿ ಮಾಡಿವೆ.
ಎರಡನೇ ಅವಧಿಗೆ ರಾಜ್ಯಪಾಲರಾಗಿ ಮುಂದುವರೆದಿರುವ ವೊಹ್ರಾ ಅವರನ್ನು ಕೆಲವು ತಿಂಗಳುಗಳಿಂದ ಅವರನ್ನು ಬದಲಾಯಿಸಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಿತ್ತು ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿರುವ ವೊಹ್ರಾ ಅವರನ್ನು 2008ರಲ್ಲಿ ಕಣಿವೆ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ವೊಹ್ರಾ ಅವರು ಗೃಹ ಮತ್ತು ರಕ್ಷಣಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.