ಸಾಂದರ್ಭಿಕ ಚಿತ್ರ 
ದೇಶ

ಅಮೆಥಿಯಲ್ಲಿ ಹಿಂದಿ ದಿನಪತ್ರಿಕೆ ವರದಿಗಾರನ ಮೇಲೆ ಗುಂಡಿನ ದಾಳಿ

ಪ್ರಮುಖ ಹಿಂದಿ ದಿನಪತ್ರಿಕೆಯೊಂದರ ವರದಿಗಾರನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ....

ಅಮೆಥಿ: ಪ್ರಮುಖ ಹಿಂದಿ ದಿನಪತ್ರಿಕೆಯೊಂದರ ವರದಿಗಾರನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಮರ್ ಉಜ್ವಲ್ ದಿನಪತ್ರಿಕೆಯ ವರದಿಗಾರ ದಿಲೀಪ್ ಕೌಶಾಲ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಜಗದೀಶಪುರ್ ಪೊಲೀಸ್ ಠಾಣಾ ಅಧಿಕಾರಿ ಆರ್ ಎ ಕನೌಜಿಯಾ ಅವರು ಹೇಳಿದ್ದಾರೆ.
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವರದಿಗಾರರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವರದಿಗಾರನ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದಿದ್ದಾರೆ. ಅಲ್ಲದೆ ಗುಂಡಿನ ದಾಳಿಗೆ ಹಳೆ ದ್ವೇಷ ಕಾರಣವಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ