ದೇಶ

ಯುವತಿ ಹಿಂಬಾಲಿಸಿದ ಪ್ರಕರಣ: ವಿಕಾಸ್ ಬರಾಲ ಜಾಮೀನು ಅರ್ಜಿ ವಜಾ

Lingaraj Badiger
ಚಂಡೀಗಢ: ನಿವೃತ್ತ ಐಎಎಸ್ ಅಧಿಕಾರಿಯ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲ ಪುತ್ರ ವಿಕಾಸ್ ಬರಾಲ ಅವರ ಜಾಮೀನು ಅರ್ಜಿಯನ್ನು ಮಂಗಳವಾರ ಜಿಲ್ಲಾ ಕೋರ್ಟ್ ವಜಾಗೊಳಿಸಿದೆ.
ಆಗಸ್ಟ್ 5ರಂದು ಯುವತಿ ಅಪಹರಣ ಯತ್ನ ಹಾಗೂ ಕಿರುಕಳ ನೀಡಿದ ಆರೋಪದ ಮೇಲೆ ವಿಕಾಸ್ ಬರಾಲ ಹಾಗೂ ಅವರ ಸ್ನೇಹಿತ ಅಶೋಕ್ ಕುಮಾರ್ ಅವರು ಪೊಲೀಸರು ಬಂಧಿಸಿದ್ದು, ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್ ವಜಾಗೊಳಿಸಿದೆ.
ಬಿಜೆಪಿ ನಾಯಕನ ಪುತ್ರ ಹಾಗೂ ಆತನ ಸ್ನೇಹಿತನ ವಿರುದ್ಧ ಐಪಿಸಿ ಸೆಕ್ಷೆನ್ 365 (ಅಪಹರಣ ಯತ್ನ) ಹಾಗೂ 511ರಡಿ ಜಾಮೀನು ರಹಿತ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಚಂಡೀಗಢದ ಹೆದ್ದಾರಿಯಲ್ಲಿ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೋಕ್ ಅವರು ನಿವೃತ್ತ ಐಎಎಸ್ ಅಧಿಕಾರಿಯ ಪುತ್ರಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನಿಸಿದ್ದರು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
SCROLL FOR NEXT