ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ 
ದೇಶ

ಡೊಕ್ಲಾಂ ನಂತಹ ಪುಟ್ಟ ವಿಚಾರ ಭಾರತ-ಚೀನಾ ಸಂಬಂಧದ ಮೇಲೆ ಪರಿಣಾಮ ಬೀರದು: ರಾಮ್ ಮಾಧವ್

ಡೋಕ್ಲಾಂನಂತರ ಪುಟ್ಟ ವಿಚಾರ ಭಾರತ ಹಾಗೂ ಚೀನಾ ರಾಷ್ಟ್ರಗಳ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಮಂಗಳವಾರ...

ನವದೆಹಲಿ: ಡೋಕ್ಲಾಂನಂತರ ಪುಟ್ಟ ವಿಚಾರ ಭಾರತ ಹಾಗೂ ಚೀನಾ ರಾಷ್ಟ್ರಗಳ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಮಂಗಳವಾರ ಹೇಳಿದ್ದಾರೆ. 
ಎರಡು ರಾಷ್ಟ್ರಗಳ ವೈಮನಸ್ಸಿಗೆ ಕಾರಣವಾಗಿದ್ದ ಡೋಕ್ಲಾಮ್ ಗಡಿ ವಿವಾದ ಸುಖಾಂತ್ಯ ಕಂಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿವಾದ ಸಂಬಂಧ ನಡೆದ ಬೆಳವಣಿಗೆಗಳು ಸ್ವಾಗತಾರ್ಹ. ಭಾರತ ಮತ್ತು ಚೀನಾ ಎರಡೂ ರಾಷ್ಟ್ರಗಳು ತಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಯುದ್ಧ ಅತೀ ದುಬಾರಿ ಎಂಬುದನ್ನು ಮನಗಂಡಿದೆ.  ಚೀನಾ ಹಾಗೂ ಭಾರತ ಪ್ರಬುದ್ಧ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಬ್ರಿಕ್ಸ್ ಸಮಾವೇಶಕ್ಕೂ ಮುನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದು ತಾತ್ಕಾಲಿಕ ಪರಿಹಾರವಷ್ಟೇ ಎಂಬ ವರದಿಗಳನ್ನು ತಳ್ಳಿಹಾಕಿರುವ ಅವರು, ಡೋಕ್ಲಾಂ ವಿಚಾರದಲ್ಲಿ ಭಾರತ ಘಟನೆಯನ್ನು ಕಾಪಾಡಿಕೊಂಡಿತು ಮತ್ತು ಶ್ರೇಷ್ಟ ಕಾರ್ಯ ವಿಧಾನಗಳನ್ನು ಅನುಸರಿಸಿದೆ. ನಾನು ನಮ್ಮನ್ನು ಪ್ರಚೋದಗೊಳಪಡದಂತೆ ನೋಡಿಕೊಂಡೆವು. ವಿವಾದ ಬಗೆಹರಿಸಲು ಪ್ರಬುದ್ಧ ರಾಜತಾಂತ್ರಿಕ ಮಾರ್ಗವನ್ನು ಅನುಸರಿಸಿದೆವು. ಈ ಬಾರಿಯ ಬ್ರಿಕ್ಸ್ ಸಮಾವೇಶ ಎರಡು ರಾಷ್ಟ್ರಗಳ ಸಂಬಂಧ ಶಕ್ತಿಯನ್ನು ವೃದ್ಧಿಸುವಲ್ಲಿ ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್