ಸಾಂದರ್ಭಿಕ ಚಿತ್ರ 
ದೇಶ

ತುರಂತೊ ಎಕ್ಸ್ ಪ್ರೆಸ್ ರೈಲು ಅಪಘಾತ: ಸಾವು, ನೋವು ಸಂಭವಿಸಿಲ್ಲ, ಕೇಂದ್ರ ರೈಲ್ವೆ ಮಾಹಿತಿ

ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಕಲ್ಯಾಣ್ ನಗರ ಹತ್ತಿರ ಸಂಭವಿಸಿದ....

ಮುಂಬೈ(ಮಹಾರಾಷ್ಟ್ರ): ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಕಲ್ಯಾಣ್ ನಗರ ಹತ್ತಿರ ಸಂಭವಿಸಿದ ನಾಗ್ಪುರ-ಮುಂಬೈ ತುರಂತೊ ಎಕ್ಸ್ ಪ್ರೆಸ್ ರೈಲು ಬೋಗಿ ಹಳಿ ತಪ್ಪಿ ಉಂಟಾದ ದುರ್ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಕೇಂದ್ರ ರೈಲ್ವೆ ದೃಢಪಡಿಸಿದೆ.
ಇದುವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಾಗ್ಪುರ-ಮುಂಬೈ ಡುರೊಂಟೊ ಎಕ್ಸ್ ಪ್ರೆಸ್ ರೈಲು ಸಂಖ್ಯೆ 12290 ಅಸಂಗೌನ್ ಮತ್ತು ವಾಸಿಂದ್ ಮಧ್ಯೆ ಹಳಿ ತಪ್ಪಿತು. ಎಂಜಿನ್ ಮತ್ತು ಏಳು ಬೋಗಿಗಳು ಹಳಿ ತಪ್ಪಿವೆ ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುನಿಲ್ ಉದಾಸಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಅಪಘಾತ ಸ್ಥಳದಿಂದ ಪ್ರಯಾಣಿಕರಿಗೆ ತಮ್ಮ ಸ್ಥಳಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರಕ್ಕೆ ನೆರವಾಗಲು ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಇಂದಿನ ಘಟನೆಯಿಂದಾಗಿ ಕಲ್ಯಾಣ್ ಮತ್ತು ಕಸಾರ ನಡುವೆ ಉಪ ನಗರ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!