ಮಹಾ ಮಳೆಗೆ ತತ್ತರಿಸಿದ ಮುಂಬೈ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ
ಮಹಾ ಮಳೆಯಿಂದಾಗಿ ದೇಶದ ವಾಣಿಜ್ಯ ನಗರಿ ಮುಂಬೈ ಅಕ್ಷರಶಃ ತತ್ತರಿಸಿ ಹೋಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....
ಮುಂಬೈ: ಮಹಾ ಮಳೆಯಿಂದಾಗಿ ದೇಶದ ವಾಣಿಜ್ಯ ನಗರಿ ಮುಂಬೈ ಅಕ್ಷರಶಃ ತತ್ತರಿಸಿ ಹೋಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಬೈನ ಶಾಲಾ-ಕಾಲೇಜ್ ಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.
ಮುಂಬೈ ಮಹಾ ಮಳೆಯ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಂದ ಮಾಹಿತಿ ಪಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳದಲ್ಲಿ ಉಳಿದುಕೊಳ್ಳುವಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಂಬೈ ಹಾಗೂ ಸುತ್ತಮುತ್ತಲ ಪ್ರದೇಶದ ನಿವಾಸಿಗಳಿಗೆ ಟ್ವೀಟರ್ ಮೂಲಕ ಪ್ರಧಾನಿ ಕರೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.