ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಅನಾಮಧೇಯ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.
ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗಡಿ ಭದ್ರತಾ ಪಡೆಗಳು ಗಸ್ತು ತಿರುಗುತ್ತಿಲ್ಲ ವೇಳೆ 20 ವರ್ಷದೊಳಗಿನ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿರುವುದು ಕಂಡು ಬಂದಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೃತದೇಹಗಳ ಮೇಲೆ ಯಾವುದೇ ರೀತಿಯ ಗಾಯಗಳಾಗಲೀ ಅಥವಾ ಹಿಂಸೆ ನೀಡಿರುವ ಕಲೆಗಳಾಗಲೀ ಇಲ್ಲ. ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.