ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್- ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ...

ಸಂಗ್ರಹ ಚಿತ್ರ
Manjula VN
Updated On : 30 Aug 2017, 12:54 pm
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ. 
ಇಂದು ಬೆಳಿಗ್ಗೆ 10.30ರ ಸುಮಾರಿಗೆ ಪಾಕಿಸ್ತಾನ ಸೇನೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ನೌಶೆರಾ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿಯಿರುವ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಗುಂಡಿನ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆ.ಕ.ಮನೀಶ್ ಮೆಹ್ತಾ ಅವರು ಹೇಳಿದ್ದಾರೆ. 

Advertisement

Advertisement

ಸಣ್ಣ ಹಾಗೂ ಸ್ವಯಂತ ಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಪ್ರಚೋದಿತ ಗುಂದಿನ ದಾಳಿ ನಡೆಸುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಈಗಲೂ ಗುಂಡಿನ ಚಕಮಕಿಗಳು ನಡೆಯುತ್ತಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments