ನವದೆಹಲಿ: ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞ ಅರವಿಂದ್ ಪಾನಗರಿಯಾ ಅವರಿಂದ ತೆರವಾದ ಸ್ಥಾನಕ್ಕೆ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಕುಮಾರ್ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ನಲ್ಲಿ (ಸಿಪಿಆರ್) ಸೀನಿಯರ್ ಫೆಲೋ ಆಗಿದ್ದರು. ಅವರು ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಡಿಫಿಲ್, ಲಖನೌ ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ.
ಈ ಹಿಂದೆ, ಅವರು ಇಂಡಸ್ಟ್ರಿ ಅಸೋಸಿಯೇಷನ್ ಎಫ್ ಐಸಿಸಿಐ ನ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಿದರು. ಜತೆಗೆ 2006-2008 ರ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಸದಸ್ಯರಾಗಿದ್ದರು.
ಕುಮಾರ್ ಅವರು ಇಂಡಿಯನ್ ಇಂಡಸ್ಟ್ರೀಸ್ (ಸಿಐಐ) ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿದ್ದರು ಮತ್ತು ಭಾರತೀಯ ಅಭಿವೃದ್ಧಿ ಇಲಾಖೆ, ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್, ಹಣಕಾಸು ಸಚಿವಾಲಯ ಗಳಲ್ಲಿ ಹಿರಿಯ ಅಧಿಕಾರಿಗಳಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics