ಸಂಗ್ರಹ ಚಿತ್ರ 
ದೇಶ

ನೂತನ ಚುನಾವಣಾ ಆಯುಕ್ತರಾಗಿ ಸುನಿಲ್ ಆರೋರಾ ನೇಮಕ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ 17 ಮಂದಿ ಉನ್ನತ ಅಧಿಕಾರಿಗಳ ಹೊಣೆಗಾರಿಕೆಯನ್ನು ಪುನಾರಚನೆ ಮಾಡಿದ್ದು, ಚುನಾವಣಾ ಆಯೋಗದ ಆಯುಕ್ತರ ಹುದ್ದೆಗೆ ಮಾಹಿತಿ ಮತ್ತು ಪ್ರಸಾರ ಖಾತೆಯ ಮಾಜಿ ಕಾರ್ಯದರ್ಶಿಯಾಗಿದ್ದ ಸುನಿಲ್ ಅರೋರಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ 17 ಮಂದಿ ಉನ್ನತ ಅಧಿಕಾರಿಗಳ ಹೊಣೆಗಾರಿಕೆಯನ್ನು ಪುನಾರಚನೆ ಮಾಡಿದ್ದು, ಚುನಾವಣಾ ಆಯೋಗದ ಆಯುಕ್ತರ ಹುದ್ದೆಗೆ ಮಾಹಿತಿ ಮತ್ತು ಪ್ರಸಾರ ಖಾತೆಯ ಮಾಜಿ ಕಾರ್ಯದರ್ಶಿಯಾಗಿದ್ದ ಸುನಿಲ್ ಅರೋರಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಸುನಿಲ್ ಅರೋರಾ ಅವರು ಪ್ರಸಾರ ಭಾರತಿಯ ಸಿಇಒ ಆಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರ ನೇತೃತ್ವದಲ್ಲೇ 2019ರ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿಂದೆ ಚುನಾವಣಾ ಆಯುಕ್ತರಾಗಿದ್ದ ನಸೀಮ್ ಜೈದಿ ಅವರು ಕಳೆದ ಜುಲೈನಲ್ಲಿ ನಿವೃತ್ತರಾಗಿದ್ದರು. ಇವರ ಬಳಿಕ ಅಚಲ್ ಕುಮಾರ್ ಜೋತಿ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಅಧಿಕಾರಾವಧಿ ಜನವರಿ 23 2018ಕ್ಕೆ ಕೊನೆಯಾಗಲಿದೆ. ಇದಕ್ಕೂ ಮುಂಚಿತವಾಗಿಯೇ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನು ನೇಮಕ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮತ್ತೋರ್ವ ಚುನಾವಣಾ ಆಯುಕ್ತ ಓ.ಪಿ.ರಾವತ್ ಅವರ ಅಧಿಕಾರಾವಧಿ 2018ರ ಡಿಸೆಂಬರ್ ನಲ್ಲಿ ಕೊನೆಗೊಳ್ಳಲಿದೆ.  2021 ಏಪ್ರಿಲ್ 12 ರವರೆಗೂ ಸುನಿಲ್ ಅರೋರಾ ಅವರು ಚುನಾವಣಾ ಆಯುಕ್ತರಾಗಿ ಮುಂದುವರೆಯಲಿದ್ದಾರೆ.

17 ಮಂದಿ ಉನ್ನತ ಅಧಿಕಾರಿಗಳ ಹೊಣೆಗಾರಿಕೆ ಪುನಾರಚನೆ
ಇದೇ ವೇಳೆ ಚುನಾವಣಾ ಆಯೋಗವಲ್ಲದೇ ಕೇಂದ್ರ ಸರ್ಕಾರ ಹಲವು ಸಂಸ್ಥೆಗಳ ಹೊಣೆಗಾರಿಕೆಯನ್ನು ಪುನಾರಚನೆ ಮಾಡಿದ್ದು, ಗೃಹಕಾರ್ಯದರ್ಶಿಯಾಗಿ ನಿವೃತ್ತರಾಗುತ್ತಿರುವ ರಾಜೀವ್ ಮೆಹ್ರಿಶಿ ಅವರನ್ನು ಭಾರತದ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಂತೆಯೇ ರಾಜೀವ್ ಕುಮಾರ್, ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ ನಿಯುಕ್ತರಾಗಿದ್ದರೆ, ಸಿಬಿಎಸ್‌ಇ ಅಧ್ಯಕ್ಷರಾಗಿ ಅನಿತಾ ಕರ್ವಾಲ್ ನೇಮಕಗೊಂಡಿದ್ದಾರೆ.

ಇನ್ನು ಗುರುವಾರ ಸೇವೆಯಿಂದ ನಿವೃತ್ತರಾದ ಮೆಹರ್ಷಿ ಜತೆಗೆ ಉಪ ಸಿಎಜಿಯಾಗಿ ಐಎ & ಎಸ್ ಅಧಿಕಾರಿ ರಂಜನ್ ಕುಮಾರ್ ಘೋಷ್ ಅವರನ್ನು ನೇಮಕ ಮಾಡಲಾಗಿದ್ದು, ಸಿಎಜಿ ಹುದ್ದೆಯೊಂದಿಗೆ ಮಹರ್ಷಿ ಭಾರತೀಯ ಆಡಳಿತ ವ್ಯವಸ್ಥೆಯ ಮೂರು ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದಂತಾಗಿದೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ, ಗೃಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಇವರು ಇದೀಗ ಆಡಿಟರ್ ಜನರಲ್ ಆಗಿಯೂ ನಿಯುಕ್ತರಾಗಿದ್ದಾರೆ. ಆ ಮೂಲಕ ಎನ್.ಎನ್.ವೋರಾ ಅವರ ರಾಜ್ಯಪಾಲ ಹುದ್ದೆಯನ್ನು ಇವರಿಗೆ ನೀಡಲಾಗುತ್ತದೆ ಎಂಬ ವದಂತಿಗಳಿಗೆ ಇದರಿಂದ ತೆರೆ ಬಿದ್ದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT