ಎಸ್ ಪಿ ತ್ಯಾಗಿ 
ದೇಶ

ವಿವಿಐಪಿ ಕಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿ ವಿರುದ್ಧ ಚಾರ್ಜ್ ಶೀಟ್

ಸುಮಾರು 3600 ಕೋಟಿ ರುಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ(ಐಎಎಫ್) ಮಾಜಿ...

ನವದೆಹಲಿ: ಸುಮಾರು 3600 ಕೋಟಿ ರುಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ(ಐಎಎಫ್) ಮಾಜಿ ಮುಖ್ಯಸ್ಥ ಎಸ್​ಪಿ ತ್ಯಾಗಿ ಹಾಗೂ ಇತರೆ ಒಂಬತ್ತು ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ದೆಹಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ತ್ಯಾಗಿ, ಅವರ ಸಹೋದರ ಸಂಜೀವ್ ಅಲಿಯಾಸ್ ಜ್ಯೂಲಿ ಮತ್ತು ವಕೀಲ ಗೌತಮ್ ಖೇತನ್ ಸೇರಿದಂತೆ 10 ಆರೋಪಿಗಳ ವಿರುದ್ಧ ಸಿಬಿಐ ಇಂದು ಸಿಬಿಐ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರಿಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಲಂಚದ ಹಣವನ್ನು ಭಾರತ ಮತ್ತು ಇತರೆ ಸಂಸ್ಥೆಗಳಿಗೆ ತಲುಪಿಸಿದ್ದು ಖೇತನ್ ಎಂದು ಸಿಬಿಐ ಚಾರ್ಜ್ ಶೀಟ್ ಆರೋಪಿಸಿದೆ. ಇನ್ನು ಸಂಜೀವ್ ಅವರಿಗೆ ಯುರೋಪಿಯನ್ ಮಧ್ಯವರ್ತಿ ಕಾರ್ಲೋ ಗೆರೋಸಾ ಗೊತ್ತಿದ್ದರು ಎಂದು ಸಿಬಿಐ ದೂರಿದೆ.
2007ರಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದ ಎಸ್ ಪಿ ತ್ಯಾಗಿ ಹಾಗೂ ಅವರ ಸಹೋದರ ಸಂಜೀವ್ ಮತ್ತು ಖೇತನ್ ಅವರನ್ನು ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಕಳೆದ ಡಿಸೆಂಬರ್ 9ರಂದು ಬಂಧಿಸಿತ್ತು. ಸದ್ಯ ಈ ಮೂವರು ಆರೋಪಿಗಳು ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!