ನವದೆಹಲಿ: ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್ ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳಿಲ್ಲದೇ ಇದ್ದರೆ, ಬಿಜೆಪಿಗೆ ಗೆಲುವು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಒಂದು ವೇಳೆ 2019 ರ ಲೋಕಸಭಾ ಚುನಾವಣೆ ಬ್ಯಾಲೆಟ್ ಪೇಪರ್ ಗಳಲ್ಲಿ ನಡೆಯುವುದಿದ್ದರೆ ಬಿಎಸ್ ಪಿ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲಿದೆ ಎಂದೂ ಹೇಳಿದ್ದಾರೆ.
ಬಿಜೆಪಿ ಪ್ರಾಮಾಣಿಕವಾಗಿದ್ದರೆ, ಪ್ರಜಾಭುತ್ವದಲ್ಲಿ ನಂಬಿಕೆ ಹೊಂದಿದ್ದರೆ ಇವಿಎಂ ಗಳನ್ನು ಬಿಟ್ಟು ಬ್ಯಾಲೆಟ್ ಪೇಪರ್ ಗಳ ಮೂಲಕ ಚುನಾವಣೆ ಎದುರಿಸಲಿ, 2019 ರ ಚುನಾವಣೆ ಇನ್ನೂ ಬಾಕಿ ಇದ್ದು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿದರೆ ಬಿಎಸ್ ಪಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ, ಬಿಜೆಪಿಗೆ ಗೆಲುವು ಅಸಾಧ್ಯವಾಗಲಿದೆ ಎಂದು ಮಾಯಾವತಿ ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದಾಗಲೂ ಸಹ ಮಾಯಾವತಿ ಮತಯಂತ್ರ ದುರ್ಬಳಕೆ ಮಾಡುವ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಎಂದು ಆರೋಪಿಸಿದ್ದರು.