ಸುಪ್ರೀಂ ಕೋರ್ಟ್ ತೀರ್ಪು ಪರವಾಗಿದ್ದರೆ ಪ್ಯಾನ್ ಕಾರ್ಡ್-ಆಧಾರ್ ಜೋಡಣೆಗೆ 3-6 ತಿಂಗಳ ಕಾಲಾವಕಾಶ ಸಾಧ್ಯತೆ 
ದೇಶ

ಸುಪ್ರೀಂ ಕೋರ್ಟ್ ತೀರ್ಪು ಪರವಾಗಿದ್ದರೆ ಪ್ಯಾನ್ ಕಾರ್ಡ್-ಆಧಾರ್ ಜೋಡಣೆಗೆ 3-6 ತಿಂಗಳ ಕಾಲಾವಕಾಶ ಸಾಧ್ಯತೆ

ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡ್ ಜೋಡಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪರವಾತಿ ತೀರ್ಪು ನೀಡಿದರೆ ಜೋಡಣೆಗೆ ನೀಡಲಾಗಿರುವ ಗಡುವನ್ನು 3-6 ತಿಂಗಳು ವಿಸ್ತರಿಸುವ....

ನವದೆಹಲಿ: ಆಧಾರ್ ಕಾರ್ಡ್ ನೊಂದಿಗೆ ಪ್ಯಾನ್ ಕಾರ್ಡ್ ಜೋಡಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪರವಾತಿ ತೀರ್ಪು ನೀಡಿದರೆ ಜೋಡಣೆಗೆ ನೀಡಲಾಗಿರುವ ಗಡುವನ್ನು 3-6 ತಿಂಗಳು ವಿಸ್ತರಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡುವುದರಿಂದ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಮಾಡಿ ಬೇನಾಮಿ ವಹಿವಾಟುಗಳನ್ನು ತಡೆಗಟ್ಟಬಹುದಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಡಿ.31 ರ ವರೆಗೆ ಗಡುವು ನೀಡಲಾಗಿತ್ತು. ಆದರೆ ಈಗ ಗಡುವನ್ನು 2018 ರ ಮಾರ್ಚ್ 31 ವರೆಗೆ ವಿಸ್ತರಿಸುವ ಸೂಚನೆ ನೀಡಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದರೆ ಲಿಂಕ್ ಮಾಡುವ ಪ್ರಕ್ರಿಯೆಗೆ 3-6 ತಿಂಗಳ ಕಾಲಾವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಒಟ್ಟು 33 ಕೋಟಿ ಪ್ಯಾನ್ ಕಾರ್ಡ್ ಗಳ ಪೈಕಿ ನವೆಂಬರ್ ತಿಂಗಳ ವರೆಗೂ 13.28 ಕೋಟಿಯಷ್ಟು ಪ್ಯಾನ್ ಕಾರ್ಡ್ ಗಳು ಆಧಾರ್ ಕಾರ್ಡ್ ಗೆ ಲಿಂಕ್ ಆಗಿವೆ. ಅವಧಿ ವಿಸ್ತರಿಸಿದ ಹೊರತಾಗಿಯೂ ಆಧಾರ್ ನ್ನು ಪ್ಯಾನ್ ನೊಂದಿಗೆ ಲಿಂಕ್ ಮಾಡದೇ ಇದ್ದರೆ ಪ್ಯಾನ್ ನಂಬರ್ ನ್ನು ರದ್ದುಗೊಳಿಸಲಾಗುತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ