ಒಖಿ ಚಂಡಮಾರುತ: ಮುಂಬೈ ನಲ್ಲಿ 48 ಗಂಟೆಗಳ ಮಳೆ ಮುನ್ಸೂಚನೆ, ಶಾಲೆಗಳು ಬಂದ್
ಒಖಿ ಚಂಡಮಾರುತದ ಪರಿಣಾಮ ಮುಂಬೈ ನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ
ಮುಂಬೈ: ಒಖಿ ಚಂಡಮಾರುತದ ಪರಿಣಾಮ ಮುಂಬೈ ನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ ಎಂಬ ವರದಿಗಳಾಗಿವೆ.
ಇದೇ ವೇಳೆ ಹವಾಮಾನ ಇಲಾಖೆ 48 ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ರಾತ್ರಿ ಸುರಿಯುತ್ತಿದ್ದ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಮುಂಬೈ ನ ವೆಸ್ಟ್ರನ್-ಈಸ್ಟ್ರನ್ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಮುಂಬೈ ನಲ್ಲಿ ಮತ್ತಷ್ಟು ಮಳೇಯಾಗಲಿದ್ದು ಮುಂಜಾಗೃತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.